ಬಳ್ಳಾರಿ: ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಟೀಂ ವರ್ಕ್ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಕಾಂಗ್ರೆಸ್ (Congress) ವಿಜೇತ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ (Annapurna Tukaram) ಹೇಳಿದರು.ಇದನ್ನೂ ಓದಿ: ಯಡಿಯೂರಪ್ಪ, ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ: ಯತ್ನಾಳ್ ವಾಗ್ದಾಳಿ
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮತದಾರರು ನನ್ನ ಮೇಲೆ ವಿಶ್ವಾಸ ಇಟ್ಟು ಗೆಲ್ಲಿಸಿದ್ದಾರೆ. ಅವರಿಗೆ ನಾನು ಕೃತಜ್ಞತೆ ಸಲ್ಲಿಸ್ತೇನೆ. ನಮ್ಮ ನಾಯಕರು ನಮಗೆ ಬೆಂಬಲವಾಗಿ ನಿಂತಿದ್ದರು. ಇನ್ನೂ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಟೀಂ ವರ್ಕ್ ನಮ್ಮ ಗೆಲುವಿಗೆ ಸಹಕಾರಿಯಾಗಿದೆ. ಈ ಬಾರಿ ಜನರ ಶೇಕಡಾವಾರು ಮತದಾನ ಹೆಚ್ಚಾಗಿದೆ. ಅದನ್ನು ನಾನು ಸೇವೆ ಮೂಲಕ ವಾಪಸ್ ಕೊಡುತ್ತೇನೆ. ನನ್ನ ಪತಿ ಸಂಸದರಾಗಿದ್ದಾರೆ. ನಾನು ಶಾಸಕಿಯಾಗಿದ್ದೇನೆ. ನಮ್ಮ ಜವಾಬ್ದಾರಿ ಹೆಚ್ಚಾಗಿದೆ. ದಂಪತಿಯಾಗಿದ್ವಿ, ಇದೀಗ ಸಂಸದ, ಶಾಸಕರಾಗಿ ಜನರ ಸೇವೆ ಮಾಡುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಇದೇ ವೇಳೆ ಸಂಸದ ತುಕಾರಾಂ ಮಾತನಾಡಿ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ನಾನು ಈ ಮೂಲಕ ಧನ್ಯವಾದ ತಿಳಿಸುತ್ತೇನೆ. ಅವರ ಅಭಿಮಾನ, ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುತ್ತೇವೆ. ಈ ಮೂಲಕ ನಮ್ಮ ಜವಾಬ್ದಾರಿ ಹೆಚ್ಚಾಗಿದೆ. ಸೋತ ಮೇಲೆ ಸಹಜವಾಗಿ ಹಣಬಲ ಎಂದು ಆರೋಪ ಮಾಡುತ್ತಾರೆ. ಆರೋಪ ಮಾಡುವವರು ಮಾಡಲಿ, ನಾವು ಗೆಲ್ಲುತ್ತಲೇ ಇರುತ್ತವೆ. ಜನಾರ್ದನರೆಡ್ಡಿ ಗಂಗಾವತಿಯಲ್ಲಿ ಏನು ಅಭಿವೃದ್ದಿ ಮಾಡಿದ್ದಾರೆ ತೋರಿಸಲಿ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್