ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra Assembly Polls) ಬಿಜೆಪಿ 99 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ ಸೇರಿದಂತೆ 99 ಅಭ್ಯರ್ಥಿಗಳಿಗೆ (Candidates) ಟಿಕೆಟ್ ನೀಡಿದೆ.
भारतीय जनता पार्टी की केन्द्रीय चुनाव समिति ने होने वाले महाराष्ट्र विधानसभा चुनाव 2024 के लिए निम्नलिखित नामों पर अपनी स्वीकृति प्रदान की है। (1/2) pic.twitter.com/DqMuh53UV5
— BJP (@BJP4India) October 20, 2024
Advertisement
ನಾಗ್ಪುರ ನೈಋತ್ಯ (ಸೌತ್‌ವೆಸ್ಟ್) ಕ್ಷೇತ್ರದಿಂದ ದೇವೇಂದ್ರ ಫಡ್ನವಿಸ್ (Devendra Fadnavis), ಕಮ್ತಿ ಕ್ಷೇದ್ರದಿಂದ ಬವಾಂಕುಲೆ ಅವರನ್ನ ಕಣಕ್ಕಿಳಿಸಿದೆ. ಉಳಿದಂತೆ ಘಾಟ್‌ಕೋಪರ್ ಪಶ್ಚಿಮದಿಂದ ರಾಮ್ ಕದಮ್, ಚಿಕ್ಲಿಯಿಂದ ಶ್ವೇತಾ ಮಹಾಲೆ ಪಾಟೀಲ್, ಭೋಕರ್‌ನಿಂದ ಶ್ರೀಜಯಾ ಅಶೋಕ್ ಚವಾಣ್ ಮತ್ತು ಕಂಕಾವ್ಲಿಯಿಂದ ನಿತೀಶ್ ರಾಣೆ ಅವರನ್ನು ಕಣಕ್ಕಿಳಿಸಿದೆ.
Advertisement
भारतीय जनता पार्टी की केन्द्रीय चुनाव समिति ने होने वाले महाराष्ट्र विधानसभा चुनाव 2024 के लिए निम्नलिखित नामों पर अपनी स्वीकृति प्रदान की है। (2/2) pic.twitter.com/8MfB5A94Ei
— BJP (@BJP4India) October 20, 2024
Advertisement
ಶ್ರೀಜಯಾ ಅಶೋಕ್ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಪುತ್ರಿಯಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದನ್ನೂ ಓದಿ: ರಾಜಸ್ತಾನ| ಬಸ್-ರಿಕ್ಷಾ ನಡುವೆ ಭೀಕರ ಅಪಘಾತ; 8 ಮಕ್ಕಳು ಸೇರಿ 12 ಮಂದಿ ಸಾವು
Advertisement
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್ ಯಾರು?
ಹಾಲಿ ಸಿಎಂ ಏಕನಾಥ್ ಶಿಂಧೆ ಬಣದ ಶಿವಸೇನೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಶತಾಯಗತಾಯ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿದೆ. ಹರಿಯಾಣ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಬಾರಿಸಿರುವ ಬಿಜೆಪಿ ಇದೀಗ ಮಹಾರಾಷ್ಟ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ತಯಾರಿ ನಡೆಸಿದೆ.
4.97 ಕೋಟಿ ಮತದಾರರು ನೋಂದಣಿ:
ಈ ಬಾರಿ ಮಹಾರಾಷ್ಟ್ರ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ. 26 ಜಿಲ್ಲೆಗಳ 288 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 4.97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. 1,00,186 ಮತದಾನ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ಮತದಾನ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಸೌಕರ್ಯಗಳನ್ನು ನಿರ್ಮಿಸಲಾಗುವುದು. ಮತದಾನದ ಲೈನ್‌ನಲ್ಲಿ ಕುರ್ಚಿ ಮತ್ತು ಟೇಬಲ್ ಹಾಕಲು ಸೂಚಿಸಲಾಗಿದೆ. ಇದು ವೃದ್ಧ ಮತದಾರರಿಗೆ ಅನುಕೂಲವಾಗಲಿದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಿರಿಯರ ಮತ ಪಡೆಯುವ ರೂಟ್‌ಮ್ಯಾಪ್ ರಾಜಕೀಯ ಪಕ್ಷಗಳಿಗೆ ನೀಡಲಾಗುವುದು. ಮತದಾನದ ಸಂಪೂರ್ಣ ವೀಡಿಯೋ ಚಿತ್ರೀಕರಣ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಅಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.