ಮುಂಬೈ: ಮಹಾರಾಷ್ಟ್ರ ರಾಜಕೀಯ (Maharashtra Politics) ವಲಯದಲ್ಲಿ ಭಾರೀ ಬೆಳವಣಿಗೆಯಾಗಿದೆ. ಲೋಕಸಭಾ ಚುನಾವಣೆ (Lok Sabha Elections) ಫಲಿತಾಂಶದ ಬೆನ್ನಲ್ಲೇ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ರಾಜೀನಾಮೆ ಘೋಷಿಸಿದ್ದಾರೆ.
#WATCH | Mumbai: Maharashtra Deputy CM Devendra Fadnavis says, “…This debacle that happened in Maharashtra, our seats have reduced, the entire responsibility for this is mine. I accept this responsibility and will try to fulfill whatever is lacking. I am not a person who will… pic.twitter.com/ypJzTTXHf4
— ANI (@ANI) June 5, 2024
ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು, ಇದರ ನೈತಿಕ ಹೊಣೆ ಹೊತ್ತ ಫಡ್ನವಿಸ್ (Devendra Fadnavis) ರಾಜೀನಾಮೆ ಘೋಷಿಸಿದ್ದಾರೆ. ಸರ್ಕಾರದ ಜವಬ್ದಾರಿಯಿಂದ ಬಿಡುಗಡೆಗೊಳಿಸಲು ಹೈಕಮಾಂಡ್‌ಗೆ (BJP Highcommond) ಮನವಿ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿತೀಶ್, ಯಾದವ್ ಒಂದೇ ವಿಮಾನದಲ್ಲಿ ಪ್ರಯಾಣ- ಊಹಾಪೋಹ ಅಲ್ಲಗೆಳೆದ ಜೆಡಿಯು
ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು ಮಹಾ ವಿಕಾಸ ಅಘಾಡಿ ಮೈತ್ರಿ ಹೆಚ್ಚು ಸ್ಥಾನ ಗೆದ್ದುಕೊಂಡಿದೆ. ಒಟ್ಟು 48 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 13, ಬಿಜೆಪಿ 9, ಶಿವಸೇನೆ (ಉದ್ಧವ್ ಠಾಕ್ರೆ) 9, ಎನ್‌ಸಿಪಿ( ಶರಾದ್ ಪವಾರ್) 8, ಶಿಂಧೆ(ಶಿವಸೇನೆ) 7 ಸ್ಥಾನವನ್ನು ಗೆದ್ದುಕೊಂಡಿದೆ.
2019 ರಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ 43 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಯುಪಿಎ ಮೈತ್ರಿ ಕೇವಲ 5 ಸ್ಥಾನ ಮಾತ್ರ ಗೆದ್ದುಕೊಂಡಿತ್ತು. ಮುಂದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಒಂದು ಕ್ಷೇತ್ರದ ಸೋಲು – ಮತ್ತೆ ಎನ್‌ಡಿಎಗೆ ಸೇರ್ತಾರಾ ಉದ್ಧವ್?