ಮುಂಬೈ: ಶಿವಸೇನೆ ನಾಯಕ ಸಂಜಯ್ ರಾವತ್ ಹತಾಶ ವ್ಯಕ್ತಿಯಾಗಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜಯ್ ರಾವತ್ ಹತಾಶ್ ವ್ಯಕ್ತಿ. ಅವರಿಗೆ ಯಾವುದೇ ಕೆಲಸವಿಲ್ಲ. ಇದರಿಂದಾಗಿ ಅವರು ದಿನವಿಡೀ ಏನೇನೋ ಹೇಳುತ್ತಲೇ ಇರುತ್ತಾರೆ ಎಂದು ತಿರುಗೇಟು ನೀಡಿದರು.
Advertisement
Advertisement
ಬಿಜೆಪಿ ಹಾಗೂ ಎಂಎನ್‍ಎಸ್ ಮೈತ್ರಿ ಸಾಧ್ಯತೆಯ ಬಗ್ಗೆ ಇರುವ ಊಹಾಪೋಹವನ್ನು ನಿರಾಕರಿಸಿದ ಅವರು, ಈ ಹಿಂದೆ ರಾಜ್ ಠಾಕ್ರೆ ಅವರು ಮೇ. 3ರೊಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಗಡುವು ನೀಡಿದ್ದರು. ಇದಕ್ಕೆ ಬಿಜೆಪಿಯ ಬೆಂಬಲವಿದೆ. ಇದನ್ನು ಎಲ್ಲಾ ನಾಯಕರು ಅನುಸರಿಸುತ್ತಾರೆ ಎಂದು ತಿಳಿಸಿದರು.
Advertisement
Advertisement
ಭಾನುವಾರದಂದು ಶಿವಸೇನೆ ಸಂಸದ ಸಂಜಯ್ ರಾವತ್ ಮಾತನಾಡಿ, ಮಸೀದಿಗಳಲ್ಲಿ ಧ್ವನಿವರ್ಧಕಗಳ ತೆಗೆದುಹಾಕುವ ಬಗ್ಗೆ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‍ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಹೊಸ ಹಿಂದೂ ಓವೈಸಿಯಾಗಿದ್ದಾರೆ. ಬಿಜೆಪಿಯ ಬೆಂಬಲದೊಂದಿಗೆ ಹೊಸ ಹಿಂದೂ ಓವೈಸಿಯ ಉದಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಬಿಜೆಪಿ ಬೆಂಬಲದೊಂದಿಗೆ ಹೊಸ ಹಿಂದೂ ಓವೈಸಿ ಉದಯ : ರಾಜ್ ಠಾಕ್ರೆ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯನ್ನು ಹೇಗೆ ಬಳಸಿಕೊಂಡಿರೋ, ಅದೇ ರೀತಿ ಮಹಾರಾಷ್ಟ್ರದಲ್ಲಿ ಬಿಜೆಪಿ ರಾಜ್ ಠಾಕ್ರೆ ಅವರನ್ನು ಬಳಸಿಕೊಳ್ಳುತ್ತಿದೆ ಕಿಡಿಕಾರಿದ್ದರು. ಇದನ್ನೂ ಓದಿ: ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್ ಗಾಂಧಿ