ನಟ ದರ್ಶನ್ (Darshan) ಫೆ.16ರಂದು ಬರ್ತ್‌ಡೇ ಸಂಭ್ರಮವಾಗಿದ್ದು, ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಲ್ಲ ಎಂದು ವಿಡಿಯೋ ಮೂಲಕ ಫ್ಯಾನ್ಸ್‌ಗೆ ಮನವಿ ಮಾಡಿದ್ದಾರೆ. ಇದರೊಂದಿಗೆ ಡೈರೆಕ್ಟರ್ ಪ್ರೇಮ್ ಜೊತೆ ದರ್ಶನ್ ಸಿನಿಮಾ ಬರಲಿದೆಯಾ ಎಂಬ ಪ್ರಶ್ನೆಗೆ ವಿಡಿಯೋ ಮೂಲಕ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಪ್ರೇಮ್ (Prem) ಜೊತೆ ಸಿನಿಮಾ ಮಾಡೋದು ನನ್ನ ಗುರುಗಳು ಹಾಗೂ ಸ್ನೇಹಿತೆ ರಕ್ಷಿತಾ (Rakshitha Prem) ಆಸೆ ಎಂದಿದ್ದಾರೆ.
Advertisement
ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆ ಈ ವರ್ಷ ಬರ್ತ್‌ಡೇಗೆ ನಾನು ಸಿಗೋದಿಲ್ಲ. ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ದರ್ಶನ್ ಸೆಲೆಬ್ರಿಟಿಗಳಿಗೆ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ:ಆರೋಗ್ಯ ಸಮಸ್ಯೆ ಇದೆ, ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ: ಸೆಲೆಬ್ರಿಟಿಗಳಿಗೆ ದರ್ಶನ್ ಮನವಿ
Advertisement
Advertisement
ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ. 101% ಹೌದು ನಾನು ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ದುಡ್ಡು ವಾಪಸ್ ಕೊಟ್ಟಿದ್ದೇನೆ. ನನ್ನ ಹತ್ತಿರ ಸಿನಿಮಾಗೆ ಬರುವಾಗಲೇ ಅವರಿಗೆ ಸಿಕ್ಕಾಪಟ್ಟೆ ಕಮಿಟ್‌ಮೆಂಟ್ ಇತ್ತು. ಹಾಗಾಗಿ ವಾಪಸ್ ಕೊಟ್ಟೆ. ಮುಂದೆ ನಾವಿಬ್ಬರೂ ಸಿನಿಮಾ ಮಾಡೇ ಮಾಡ್ತೀವಿ ಎಂದಿದ್ದಾರೆ. ಅದಷ್ಟೇ ಅಲ್ಲ, ಮುಂದೆ ನಾನು ಪ್ರೇಮ್ ಒಟ್ಟಾಗಿ ಸಿನಿಮಾ ಮಾಡೇ ಮಾಡುತ್ತೇವೆ. ನನ್ನ ಗುರುಗಳು, ನನ್ನ ಪ್ರೀತಿಯ ಸ್ನೇಹಿತೆಯ ಆಸೆ ಅದು. ಕೆವಿಎನ್ ಪ್ರೊಡಕ್ಷನ್‌ನವರು ಅವರು ಬೇರೆ ಸಿನಿಮಾ ಮಾಡ್ತಿದ್ದಾರೆ. ಮತ್ತೊಂದು ಪ್ರೊಡಕ್ಷನ್ ಅಂದಾಗ ಅವರಿಗೂ ಕಷ್ಟ ಆಗುತ್ತೆ. ಅದಕ್ಕೆ ಯಾರು ಯಾವುದೇ ಪ್ರೊಡಕ್ಷನ್ ಇಲ್ಲದೇ ಸುಮ್ಮನೆ ಇರತಾರಲ್ಲ ಅವರಿಗೆ ಅವಕಾಶ ಕೊಡೋಣ ಅಂತ ಎಂದಿದ್ದಾರೆ.
Advertisement
ನಿಮ್ಮ ಪ್ರೀತಿ, ಅಭಿಮಾನ, ಪ್ರೋತ್ಸಾಹ ನನ್ನ ಮೇಲೆ ಇರೋದಕ್ಕೆ ಯಾವಾಗಲೂ ಚಿರಋಣಿಯಾಗಿರುತ್ತೇನೆ. ಇದನ್ನು ನಾನೆಂದೂ ತೀರಿಸೋಕೆ ಆಗಲ್ಲ ಎಂದಿದ್ದಾರೆ. ಈ ವೇಳೆ, ನಾನು 3 ಜನರಿಗೆ ಥ್ಯಾಂಕ್ಸ್ ಹೇಳಬೇಕು. ಧನ್ವೀರ್ ಯಾವಾಗಲೂ ಪಾಪ ನನ್ನ ಜೊತೆಯಲಿಯೇ ಇರುತ್ತಿದ್ದರು. ನನ್ನ ದೊಡ್ಡ ಬೆಂಬಲವಾಗಿ ನಿಂತರು. ‘ಬುಲ್ ಬುಲ್’ ರಚಿತಾ ರಾಮ್‌ಗೂ ಥ್ಯಾಂಕ್ಯೂ. ನನ್ನ ಪ್ರಾಣ ಸ್ನೇಹಿತೆ ಆಗಿರುವ ರಕ್ಷಿತಾಗೂ ಥ್ಯಾಂಕ್ಸ್. ನನ್ನ ಎಲ್ಲಾ ಸೆಲೆಬ್ರಿಟಿಗಳಿಗೂ ಧನ್ಯವಾದಗಳು ಎಂದಿದ್ದಾರೆ.
ದರ್ಶನ್ ಹಾಗೂ ನಟಿ ರಕ್ಷಿತಾ ಪ್ರೇಮ್ ಹಲವು ವರ್ಷಗಳಿಂದ ಸ್ನೇಹಿತರು. ಆದರೆ ಇತ್ತೀಚೆಗೆ ದರ್ಶನ್ ಜೊತೆ ಪ್ರೇಮ್ ಸಿನಿಮಾ ಬರಲಿದ್ಯಾ? ಎಂದು ಅನುಮಾನ ವ್ಯಕ್ತಪಡಿಸಿದವರಿಗೆ ದರ್ಶನ್ ವಿಡಿಯೋ ಮೂಲಕ ಕ್ಲ್ಯಾರಿಟಿ ನೀಡಿದ್ದಾರೆ.