ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಅವರು ಪತ್ನಿಯೊಂದಿಗೆ ನಿರ್ಮಾಪಕಿ ಶೈಲಜಾ ನಾಗ್ (Shylaja Nag) ಪುತ್ರಿಯ ಭರತನಾಟ್ಯ ರಂಗಪ್ರವೇಶದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಜೋಡಿ ಜೊತೆಯಾಗಿ ಇರೋದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇದನ್ನೂ ಓದಿ:ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್
ಬಿ. ಸುರೇಶ್ ಮತ್ತು ಶೈಲಜಾ ನಾಗ್ ಪುತ್ರಿ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಏ.20ರಂದು ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ಎಡಿಎ ರಂಗಮಂದಿರದಲ್ಲಿ ನಡೆದಿದೆ. ಈ ಹಿನ್ನೆಲೆ ವಿಜಯಲಕ್ಷ್ಮಿ ಜೊತೆ ಆಗಮಿಸಿ ದರ್ಶನ್ ಭರತನಾಟ್ಯ ಕಾರ್ಯಕ್ರಮ ವೀಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಇದನ್ನೂ ಓದಿ:ಆಗೋದೆಲ್ಲಾ ಒಳ್ಳೆಯದಕ್ಕೆ ಭಗವಂತ ನಮ್ಮೊಂದಿಗೆ ಇದ್ದಾನೆ: ಕಹಿ ಘಟನೆ ನೆನೆದ ವೈಷ್ಣವಿ
View this post on Instagram
ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ (Vijayalakshmi) ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಅಂದಹಾಗೆ, ‘ಡೆವಿಲ್’ ಸಿನಿಮಾದ ಚಿತ್ರೀಕರಣವು ಮೈಸೂರು ಹಾಗೂ ರಾಜಸ್ಥಾನದಲ್ಲಿ ನಡೆದಿದೆ. ಈ ಸಿನಿಮಾ ಕೆಲಸ ಭರದಿಂದ ನಡೆಯುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ನಟಿಸುತ್ತಿದ್ದಾರೆ. ‘ತಾರಕ್’ ಡೈರೆಕ್ಟರ್ ಮಿಲನಾ ಪ್ರಕಾಶ್ ‘ಡೆವಿಲ್’ಗೆ ನಿರ್ದೇಶನ ಮಾಡುತ್ತಿದ್ದಾರೆ.