ಭುವನೇಶ್ವರ: ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯಲ್ಲಿ (Puri Jagannath Rath Yatra) ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಉಸಿರುಗಟ್ಟಿ ಓರ್ವ ಭಕ್ತ (Devotee) ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
Advertisement
ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲು ಆಗದೇ ಓರ್ವ ಭಕ್ತ ಮೃತಪಟ್ಟಿದ್ದಾರೆ. ನೂಕುನುಗ್ಗಲು ಬಳಿಕ ಕಾಲ್ತುಳಿತವೂ (Stampede) ಉಂಟಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: BMW ಡಿಕ್ಕಿ ಹೊಡೆದು ಮಹಿಳೆ ಸಾವು – ಸಿಎಂ ಏಕನಾಥ್ ಶಿಂಧೆ ಬಣದ ನಾಯಕನ ಪುತ್ರ ಆರೋಪಿ
Advertisement
ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ, ಭಕ್ತನೊಬ್ಬ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮಹದಾಯಿ ಯೋಜನೆಗೆ ಗೋವಾ ಮತ್ತೆ ಕ್ಯಾತೆ – ಕೇಂದ್ರದಿಂದ ‘ಪ್ರವಾಹ್’ ತಂಡ ರಚನೆ
Advertisement
Advertisement
ಕಾಲ್ತುಳಿತದ ಬಳಿಕ ಸುಮಾರು 300 ಜನರನ್ನ ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಡಿಶ್ಚಾರ್ಜ್ ಮಾಡಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಕಾಲ್ತುಳಿತದ ಬಳಿಕವೂ ರಥಯಾತ್ರೆಯು ಸುಗಮವಾಗಿ ಸಾಗಿದೆ ಎಂದು ಒಡಿಶಾ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.
ರಥಯಾತ್ರೆ ವೀಕ್ಷಿಸಿದ ರಾಷ್ಟ್ರಪತಿ:
ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆ ವೀಕ್ಷಿಸಿದ್ದಾರೆ. ಇದನ್ನೂ ಓದಿ: ಹೊಸ ಕ್ರಿಮಿನಲ್ ಕಾನೂನಿನಡಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಸ್ ದಾಖಲು