ಬೆಳಗಾವಿ: ಭಕ್ತರೊಬ್ಬ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಮಾಡುವಂತೆ ಆಗ್ರಹಿಸಿ ಸವದತ್ತಿ ಯಲ್ಲಮ್ಮದೇವಿಗೆ (Savadatti Yallamma) ಹರಕೆ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಹರಕೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾನೆ.
ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಯಾಗಿ ವಿಭಜಿಸುವಂತೆ ಸುದೀರ್ಘ 4 ಪುಟಗಳ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಬೇಡಿಕೆ ಇಟ್ಟಿದ್ದಾನೆ. ಅದರಲ್ಲಿ ಪ್ರಮುಖವಾಗಿ ಬೆಳಗಾವಿ, ಗೋಕಾಕ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆಯನ್ನು ಮಾಡುವಂತೆ ಹರಕೆ ಹೊತ್ತು ದೇವರ ಕಾಣಿಕೆ ಹುಂಡಿಯಲ್ಲಿ ಪತ್ರ ಬರೆದು ಹಾಕಿದ್ದಾರೆ. ಜೆ.ಹೆಚ್.ಪಟೇಲ್ ಸಿಎಂ ಆಗಿದ್ದಾಗ ಬೆಳಗಾವಿ ಜಿಲ್ಲೆಯಲ್ಲಿ 10 ತಾಲೂಕು ಇದ್ದವು.
Advertisement
Advertisement
1997ರಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ ಸೇರಿ ಮೂರು ಜಿಲ್ಲೆಗಳಾಗಿ ಘೋಷಣೆ ಮಾಡಲಾಗಿತ್ತು. ಈಗ 14 ತಾಲೂಕು ಆಗಿದ್ದು, ಈಗ 4 ಜಿಲ್ಲೆಗಳನ್ನಾಗಿ ಮಾಡಬೇಕು. ಯಾದಗಿರಿಯಲ್ಲಿ 3 ತಾಲೂಕು ಇದ್ದರೂ, ಅದನ್ನು ಜಿಲ್ಲೆ ಮಾಡಿದ್ದಾರೆ. ಕೊಡಗುವಿನಲ್ಲಿ 2 ವಿಧಾನ ಸಭಾ ಕ್ಷೇತ್ರ ಇದ್ದರೂ, ಅದನ್ನು ಜಿಲ್ಲೆ ಮಾಡಿದ್ದಾರೆ. ಹಾಗೇ ನಮ್ಮ ಜಿಲ್ಲೆಯಲ್ಲಿ 14 ತಾಲೂಕು, 18 ವಿಧಾನ ಸಭಾ ಕ್ಷೇತ್ರವಿದ್ದು, 4 ಜಿಲ್ಲೆಗಳನ್ನಾಗಿ ಮಾಡಬೇಕು. 4 ಜಿಲ್ಲೆ ಮಾಡಿ ಎರಡು ಪ್ರತ್ಯೇಕ ಉಪವಿಭಾಗಾಧಿಕಾರಿ ಕಚೇರಿಯನ್ನು ಮಾಡಬೇಕು. ಈಗಾಗಲೇ ಹುಂಡೇಕರ್, ವಾಸುದೇವ, ಗದ್ದಿಗೌಡರ ಸಮಿತಿ ಗೋಕಾಕ ಜಿಲ್ಲೆಗೆ ಶಿಫಾರಸು ಮಾಡಿವೆ. ಇದನ್ನೂ ಓದಿ: PFI ನಾಯಕನ ಮನೆಯಲ್ಲಿ ಸಾವರ್ಕರ್ ಪುಸ್ತಕ – ಶಿವಮೊಗ್ಗದಲ್ಲಿ 19 ಲಕ್ಷ ಪತ್ತೆ
Advertisement
Advertisement
ಎಲ್‍ಎಲ್‍ಬಿ ಪಾಸ್ ಆದವರಿಗೆ ವಕೀಲರು ಅಂತಾರೆ ಹೊರತು ಎಸ್‍ಎಸ್‍ಎಲ್ಸಿ ಪಾಸ್ ಆದವರಿಗೆ ವಕೀಲರು ಎನ್ನಲಾಗದು. 3 ಸಮಿತಿಗಳು ಮಾಡಿದ ಶಿಫಾರಸ್ಸಿನಂತೆ ಗೋಕಾಕನ್ನು ಜಿಲ್ಲೆಯಾಗಿ ಮಾಡಿ ಎಂದು 4 ಪುಟಗಳ ಸುದೀರ್ಘ ಪತ್ರವನ್ನ ಬರೆದ ಭಕ್ತರು ಸವದತ್ತಿ ಯಲ್ಲಮ್ಮ ದೇವಿಗೆ ಹುಂಡಿಗೆ ಹಾಕಿದ್ದಾನೆ. ಸತತ 5 ದಿನಗಳ ಕಾಲ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದೆ. ಈ ವೇಳೆ ಭಕ್ತರು ಚಿತ್ರ, ವಿಚಿತ್ರ ಹರಕೆ ಪತ್ರ ಪತ್ತೆಯಾಗಿವೆ. ಇದನ್ನೂ ಓದಿ: ಸಾಲದ ಸುಳಿಯಲ್ಲಿ ಬಿಎಂಟಿಸಿ ನಿಗಮ : ಶ್ರೀರಾಮುಲು