ತಿರುಮಲ: ಶನಿವಾರ, ಭಾನುವಾರದ ರಜೆ ಹಾಗೂ ಸೋಮವಾರ ಬಕ್ರೀದ್ ರಜೆ ಹಿನ್ನೆಲೆಯಲ್ಲಿ ತಿರುಮಲದ ವೆಂಕಟೇಶ್ವರ ಸ್ವಾಮಿಯ (Venkateswara Temple, Tirumala) ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದಾರೆ.
ಶನಿವಾರ ಮತ್ತು ಭಾನುವಾರ ಭಾರೀ ಜನದಟ್ಟಣೆ ಕಂಡುಬಂದಿದ್ದು, ಭಕ್ತಾದಿಗಳು ದೇವರ ದರ್ಶನಕ್ಕಾಗಿ ಸುಮಾರು 3 ಕಿ.ಮೀ.ವರೆಗೂ ಸರತಿ ಸಾಲಿನಲ್ಲಿ ನಿಂತಿದ್ದರು. ಇದನ್ನೂ ಓದಿ: ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ – ಸ್ನೇಹಿತನ ಮಾತು ಕೇಳಿ ಶೆಡ್‌ನಲ್ಲಿ ಎಲೆಕ್ಟ್ರಿಕ್ ಶಾಕ್ ನೀಡಿ ಸಿಕ್ಕಿಬಿದ್ದ
ಚುನಾವಣೆ ಮುಕ್ತಾಯ, ವಾರಾಂತ್ಯ ರಜೆ, ಬಹುತೇಕ ಪರೀಕ್ಷೆಗಳು ಮುಗಿದಿರುವುದು ಜೊತೆ ಬಕ್ರೀದ್ ರಜೆಯೂ (Bakrid) ಸೇರಿದ್ದರಿಂದ ತಿರುಪತಿಗೆ ಹೆಚ್ಚಿನ ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸೋಮವಾರವೂ ಈ ದಟ್ಟಣೆ ಮುಂದುವರಿಯುವ ಸಾಧ್ಯತೆಯಿದೆ.