ಭೋಪಾಲ್: ಮಧ್ಯಪ್ರದೇಶದ (Madhya Pradesh) ಧಾರ್ (Dhar) ಜಿಲ್ಲೆಯ ವಿವಾದಿತ ಭೋಜಶಾಲಾ-ಕಮಾಲ್ ಮೌಲಾ ಮಸೀದಿ (Bhojshala Kamal Maula Mosque) ಕಟ್ಟಡವು ಸರಸ್ವತಿ ದೇವಿಯ ದೇಗುಲ (Saraswati Temple) ಎಂದು ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ ಮರುದಿನವೇ ಭೋಜಶಾಲೆಯಲ್ಲಿ ಹಿಂದೂಗಳು ಮೊದಲ ಪೂಜೆ ಸಲ್ಲಿಸಿದ್ದಾರೆ.
ಭೋಜಶಾಲೆಗೆ ಭಕ್ತರ ದಂಡು ಆಗಮಿಸಿ ಪೂಜೆ ಸಲ್ಲಿಸಿ, ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಭೋಜ್ ಉತ್ಸವ ಸಮಿತಿಯ ಸದಸ್ಯರು ನೂರಾರು ಭಕ್ತರೊಂದಿಗೆ ವೈದಿಕ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾ ಪೂಜೆ ಸಲ್ಲಿಸಿದರು. ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ, ಭೋಜ್ ಉತ್ಸವ ಸಮಿತಿಯ ಭಕ್ತರು ಮತ್ತು ಅಧಿಕಾರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಇಂಧನ ದರ ಏರಿಕೆ ಬೆನ್ನಲ್ಲೇ ಅಗತ್ಯ ವಸ್ತುಗಳ ಹಣದುಬ್ಬರ – ಅಕ್ಕಿ ದರ ಕೆಜಿಗೆ 3 ರೂ. ಏರಿಕೆ
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ದಶಕಗಳಿಂದ ವಿವಾದದ ಕೇಂದ್ರವಾಗಿದ್ದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಭೋಜಶಾಲಾ ಆವರಣವನ್ನು ದೇವಸ್ಥಾನ ಎಂದು ಘೋಷಿಸಿದೆ. ಇದನ್ನೂ ಓದಿ: ತಮಿಳುನಾಡು ನೂತನ ಸಚಿವರಿಗೆ ಖಾತೆ ಹಂಚಿಕೆ – ಹಣಕಾಸು ಬಿಟ್ಟು 16 ಇಲಾಖೆ ತನ್ನಲ್ಲೇ ಇಟ್ಟುಕೊಂಡ ದಳಪತಿ

ಹೈಕೋರ್ಟ್ನ ಇಂದೋರ್ ಪೀಠವು ಈ ಸಂಕೀರ್ಣದಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಸಂಪೂರ್ಣ ಹಕ್ಕಿದೆ ಎಂದು ಎತ್ತಿಹಿಡಿದಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಆಧರಿಸಿ ನ್ಯಾಯಾಲಯವು ಈ ನಿರ್ಧಾರಕ್ಕೆ ಬಂದಿದೆ. ಸಮೀಕ್ಷೆಯ ವರದಿಯು ಈ ಸ್ಥಳವು ಮೂಲತಃ ದೇವಸ್ಥಾನವಾಗಿತ್ತು ಎಂಬುದನ್ನು ಸಾಕ್ಷ್ಯಾಧಾರಗಳೊಂದಿಗೆ ದೃಢಪಡಿಸಿತ್ತು. ಇದನ್ನೂ ಓದಿ: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ಭೂ ದಂಧೆ ನಡೆಯುತ್ತಿದೆ: ಹೆಚ್.ಡಿ ದೇವೇಗೌಡ
ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಐತಿಹಾಸಿಕ ತೀರ್ಪನ್ನು ನೀಡಿದೆ. ಮೇ 12ರಂದು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಲಾಗಿದೆ. ಇದನ್ನೂ ಓದಿ: ಹಿಂದೂಗಳಿಗೆ ಜಯ| ಭೋಜಶಾಲಾ ಇನ್ನು ದೇವಸ್ಥಾನ: ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು

