ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾದ ಗದ್ದುಗೆಗೆ ಭಕ್ತರು ಬುಧವಾರವೇ ಭೇಟಿ ನೀಡಬಹುದು. ಈಗ ಸಿದ್ಧಲಿಂಗ ಸ್ವಾಮೀಜಿ ಜೊತೆ ವಿವಿಧ ಮಠಾಧಿಶರು ಪೂಜೆ ನಡೆಸುತ್ತಿದ್ದು, ಪೂಜೆ ಮುಗಿದ ಬಳಿಕ ಭಕ್ತಾಧಿಗಳಿಗೆ ಗದ್ದುಗೆ ದರ್ಶನ ಪಡೆಯಲು ಅವಕಾಶ ನೀಡಲಾಗುತ್ತದೆ.
ನಡೆದಾಡುವ ದೇವರು ಲಿಂಗೈಕ್ಯರಾದ ಗದ್ದುಗೆಯಲ್ಲಿ ಇಂದಿನ ಪೂಜಾ ವಿಧಾನಗಳು ಆರಂಭವಾಗಿದೆ. ಈ ಪೂಜೆ ಸಂದರ್ಭದಲ್ಲಿ ಸಿದ್ಧಲಿಂಗೇಶ್ವರ ಸ್ವಾಮಿಗೆ ಅಭಿಷೇಕ ಹಾಗೂ ಮಂತ್ರಪಠಣೆ ಮಾಡಿ ಪೂಜೆ ಮಾಡಲಾಗುತ್ತದೆ. ಸಿದ್ದಗಂಗೆಯ ಉದ್ದಾನ ಶಿವಯೋಗಿಗಳ ಗದ್ದುಗೆಯಲ್ಲಿ ಪೂಜಾ ವಿಧಾನಗಳು ಆರಂಭಗೊಂಡಿದ್ದು, ಈ ಪೂಜೆ ಪೂರ್ಣಗೊಂಡ ಬಳಿಕ ಶ್ರೀಗಳ ಗದ್ದುಗೆಗೂ ಪೂಜೆ ಸಲ್ಲಿಸಲಾಗುತ್ತದೆ. ಪೂಜೆಯ ನಂತರ ಭಕ್ತರಿಗೆ ಸಿದ್ದಗಂಗಾ ಶ್ರೀಗಳ ಗದ್ದುಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಇದನ್ನೂ ಓದಿ: ಖಾಕಿಗಳಿಗೆ ಸರ್ಕಾರದಿಂದ ವೇತನ ಹೆಚ್ಚಳದ ಉಡುಗೊರೆ!
Advertisement
Advertisement
ಗದ್ದುಗೆ ಪ್ರವೇಶಕ್ಕೆ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಮಠಕ್ಕೆ ಬಂದಿರುವ ಭಕ್ತಾಧಿಗಳು ಶ್ರೀಗಳು ಕೂರುತ್ತಿದ್ದ ವೇದಿಕೆಯ ದರ್ಶನ ಪಡೆಯುತ್ತಿದ್ದಾರೆ. ಮಠದ ಮುಂಭಾಗದ ಪ್ರಸಾದ ನಿಲಯದ ಪಕ್ಕದಲ್ಲಿಯೇ ಈ ವೇದಿಕೆ ಇದೆ. ಹಾಗೆಯೇ ರಾತ್ರಿ ಬಂದಿರುವ ಭಕ್ತರು ಮಠದ ಆವರಣದಲ್ಲಿ ವಿಶ್ರಾಂತಿ ಪಡೆದು ಬೆಳಗ್ಗೆ ವೇದಿಕೆಯ ದರ್ಶನ ಪಡೆದು ಹಿಂದಿರುಗಿದ್ದಾರೆ. ಸಿದ್ದಗಂಗಾ ಮಠದ ಸುತ್ತ ಪೊಲೀಸ್ ಭದ್ರತೆಯನ್ನು ಮುಂದುವರಿಸಲಾಗಿದೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv