ಬೆಂಗಳೂರು: ಈಗಾಗಲೇ ಮಳೆಗಾಲ ಆರಂಭವಾಗಿದೆ. ಬರುವ ತಿಂಗಳಿನಿಂದ ಮುಂಗಾರು ತೀವ್ರಗೊಳ್ಳುವ ನಿರೀಕ್ಷೆ ಇದೆ. ಸಾಮಾನ್ಯವಾಗಿ ಮಳೆಗಾಲದ ಅವಧಿಯಲ್ಲಿ ದೇವಸ್ಥಾನಕ್ಕೆ (Temple) ಬರುವವರ ಸಂಖ್ಯೆ ಕಡಿಮೆಯಾಗುತ್ತದೆ. ಈ ಸಮಸ್ಯೆ ಪರಿಹಾರಕ್ಕೆ ಮುಜರಾಯಿ ಇಲಾಖೆ ಪ್ಲಾನ್ ಮಾಡಿದೆ.
ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಇಲಾಖೆಗೆ (Muzrai Department) ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೊಸ ಸಲಹೆ ಕೊಟ್ಟಿದ್ದಾರೆ. ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾದಾಗ ಅಥವಾ ಮಳೆಗಾಲದಲ್ಲಿ ಮಳೆ ಆರ್ಭಟದ ಮಧ್ಯೆ ದೇವಸ್ಥಾನಕ್ಕೆ ಹೋಗೋದು ಹೇಗಪ್ಪಾ ಅನ್ನೋ ತಲೆನೋವು ಭಕ್ತಾದಿಗಳಲ್ಲಿ ಇರುತ್ತದೆ. ಜೊತೆಗೆ ಮಳೆ ಬಂದಾಗ ದೇವಸ್ಥಾನದ ಮುಂದೆ ಗಂಟೆಗಟ್ಟಲೆ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಸಹ ಎದುರಾಗಬಹುದು. ಹೀಗಾಗಿ ಮಳೆಗಾಲದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಇದನ್ನೂ ಓದಿ: ಟಿ20 ವಿಶ್ವಕಪ್; 7 ಪಂದ್ಯಗಳಲ್ಲಿ ಕೇವಲ 75 ರನ್, 8ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ 76 ರನ್
- Advertisement -
- Advertisement -
ಇನ್ನು ಮಳೆಗಾಲದಲ್ಲಿ ಉಂಟಾಗುವ ಇಂತಹ ಸಮಸ್ಯೆ ನಿವಾರಣೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮುಜರಾಯಿ ಇಲಾಖೆಗೆ ದೇವಾಲಯಗಳಲ್ಲಿ ಶೆಲ್ಟರ್ ನಿರ್ಮಾಣಕ್ಕೆ ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳ ಮುಂಭಾಗದಲ್ಲಿಯೂ ಶೆಲ್ಟರ್‌ಗಳು ತಲೆಯೆತ್ತಲಿವೆ. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್
- Advertisement -
- Advertisement -
ಈ ಬಗ್ಗೆ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಬಿಸಿಲಿನಿಂದ ರಕ್ಷಿಸಲು ಭಕ್ತಾದಿಗಳಿಗೆ ದೇವಾಲಯಗಳಲ್ಲಿ ಶಾಮಿಯಾನ ವ್ಯವಸ್ಥೆ ಮಾಡಿದ್ದೆವು. ಈಗ ಮಳೆಗಾಲದಲ್ಲಿ ಭಕ್ತಾದಿಗಳಿಗಾಗಿ ದೇಗುಲದ ಮುಂಭಾಗದಲ್ಲಿ ಶೆಲ್ಟರ್ ನಿರ್ಮಿಸಲು ಸಲಹೆ ಕೊಟ್ಟಿದ್ದೇನೆ. ಅದರಂತೆ ದೇವಾಲಯದಲ್ಲಿ ಶೆಲ್ಟರ್‌ಗಳು ನಿರ್ಮಾಣವಾಗಲಿವೆ. ಇದರಿಂದ ವಯಸ್ಸಾದ ಹಾಗೂ ಮಕ್ಕಳಿಗೆ ಅನುಕೂಲವಾಗಲಿದೆ. ಮೊದಲನೇ ಹಂತದಲ್ಲಿ ಹೆಚ್ಚು ಮಳೆ ಬರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ದೇವಾಲಯಗಳಲ್ಲಿ ಶೆಲ್ಟರ್ ನಿರ್ಮಿಸಲಾಗುವುದು ಎಂದರು. ಒಟ್ಟಿನಲ್ಲಿ ಮುಜರಾಯಿ ಇಲಾಖೆಯ ಈ ನಿರ್ಧಾರ ಭಕ್ತಾದಿಗಳಿಗೆ ಸಹಾಯವಾಗಲಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ – ಭಾರತದ ಪರ ವಿಶಿಷ್ಟ ದಾಖಲೆ ಬರೆದ ಹಿಟ್‌ಮ್ಯಾನ್