ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಹಾಗಾಗಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್-19 ನಿಯಮ ಪಾಲನೆ ಮಾಡುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.
Advertisement
ವಿದೇಶದಿಂದ ಆಗಮಿಸುವವರು ಮತ್ತು ಭಾರತದಿಂದ ವಿದೇಶಕ್ಕೆ ತೆರಳುವವರು ವಿಮಾನದಲ್ಲಿ ಪ್ರಯಾಣಿಸುವ ಮುನ್ನ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಪ್ರತಿಯೊಬ್ಬ ಪ್ರಯಾಣಿಕರಿಗೂ ರ್‍ಯಾಂಡಮ್ ಆಗಿ ಕೊರೊನಾ ಟೆಸ್ಟ್ ಮಾಡಿ. ಮಾಸ್ಕ್‌ಗಳನ್ನು ಪ್ರಯಾಣದ ವೇಳೆ ಬಳಸುವಂತೆ ಪ್ರಯಾಣಿಕರಿಗೆ ತಿಳಿಸಿ ಎಂದು ಡಿಜಿಸಿಎ ವಿಮಾನಯಾನ ಸಂಸ್ಥೆಗಳಿಗೆ ಸ್ಪಷ್ಟವಾಗಿ ತಿಳಿಸಿದೆ. ಇದನ್ನೂ ಓದಿ: ನಮ್ಮದು ಬೆಸ್ಟ್ ಡೀಲ್ – ರಷ್ಯಾದಿಂದ ತೈಲ ಖರೀದಿಗೆ ಜೈಶಂಕರ್ ಸಮರ್ಥನೆ
Advertisement
DGCA orders airlines to strictly comply with COVID-19 protocols inside aircraft
Read @ANI Story | https://t.co/i9u6qxLtNI
#DGCA #COVID19 pic.twitter.com/vAAya82UA4
— ANI Digital (@ani_digital) August 17, 2022
Advertisement
ದೇಶದಲ್ಲಿ ಇಂದು ಒಟ್ಟು 9,062 ಕೊರೊನಾ ಪಾಸಿಟಿವ್ ಕೇಸ್‍ಗಳು ದಾಖಲಾಗಿದೆ. ಈ ಮೂಲಕ ಈವರೆಗೆ ದೇಶದಲ್ಲಿ ಒಟ್ಟು 4,42,86,256 ಕೊರೊನಾ ಕೇಸ್ ವರದಿಯಾಗಿದೆ. ಅಲ್ಲದೇ 1,05,058 ಸಕ್ರಿಯ ಪ್ರಕರಣಗಳು ದೇಶದಲ್ಲಿದೆ ಎಂದು ಕೆಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಬುಲೆಟಿನ್‍ನಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ