ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆದಿರುವ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇದೀಗ ನಗರಕ್ಕೆ ಭೇಟಿ ನೀಡಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪ್ರವೀಣ್ ಸೂದ್ ಅವರು ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಪ್ರವೀಣ್ ಕುಮಾರ್ ನೆಟ್ಟಾರು ಹಾಗೂ ಫಾಝಿಲ್ ಹತ್ಯೆ ತನಿಖೆಯ ಪ್ರಗತಿ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇದೇ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಂದೋಬಸ್ತ್ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ
ಪಶ್ಚಿಮ ವಲಯ ಐಜಿಪಿ, ಕಮೀಷನರ್ ಹಾಗೂ ಎಸ್‍ಪಿಯವರು ಮಹಾ ನಿರ್ದೇಶಕರಿಗೆ ವರದಿ ನೀಡುತ್ತಿದ್ದಾರೆ. ಸರ್ಕ್ಯೂಟ್ ಹೌಸ್ ನಲ್ಲಿ ಉಪಹಾರ ಮುಗಿಸಿ ಕಮೀಷನರ್ ಕಚೇರಿ ಹಾಗೂ ಎಸ್‍ಪಿ ಕಚೇರಿಗೆ ಪ್ರವೀಣ್ ಸೂದ್ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಸುರತ್ಕಲ್ ಫಾಜಿಲ್ ಹತ್ಯೆ ಕೇಸಲ್ಲಿ ನಾಲ್ವರು ಭಾಗಿ ಶಂಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನಗಳ ಅಂತರದಲ್ಲಿ ಮೂರು ಕೊಲೆಗಳು ನಡೆದಿದೆ. ಮಸೂದ್ ಬಳಿಕ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ನಂತರ ಫಾಝಿಲ್ ಹತ್ಯೆ ನಡೆದಿದೆ.