4ರ ಬಾಲಕಿಯನ್ನು ರೇಪ್ ಮಾಡಿ ಪೊದೆಯಲ್ಲಿ ಬಿಸಾಕಿದ

Public TV
1 Min Read
stop rape

ಭೋಪಾಲ್: ನಾಲ್ಕು ವರ್ಷದ ಬಾಲಕಿಯ (Girl) ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಪೊದೆಯೊಳಗೆ (Bushes) ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ (Madhya Pradesh) ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 4 ವರ್ಷದ ಬಾಲಕಿ ನಾಪತ್ತೆ ಆಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು 16 ಗಂಟೆಗಳ ಕಾಲ ಬಾಲಕಿಯನ್ನು ಹುಡುಕಿದ್ದಾರೆ.

POLICE JEEP

ಸತತ 16 ಗಂಟೆಗಳ ಬಳಿಕ ಬಾಲಕಿ ಪೊದೆಗಳಲ್ಲಿ ಪತ್ತೆ ಆಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಇಡಿ ಸಂಕಷ್ಟ- ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

ARREST

ಘಟನೆಗೆ ಸಂಬಂಧಿಸಿ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ರೆಸ್ಟೋರೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದ. ಮೊಬೈಲ್‍ನಲ್ಲಿ (Mobile) ಗೇಮಿಂಗ್ ವೀಡಿಯೋಗಳನ್ನು ತೋರಿಸುವ ಮೂಲಕ ಬಾಲಕಿಯ ನಂಬಿಕೆ ಗಳಿಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆಕೆಯನ್ನು ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹೊರಗೆ ಬರದಿದ್ರೆ ಕಾಲು ಮುರಿಯುತ್ತೇವೆ- SFI ಕಾರ್ಯಕರ್ತರಿಂದ ಪ್ರಾಂಶುಪಾಲರಿಗೆ ಧಮ್ಕಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *