ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಬಳಿಕ ಶ್ರೀಲೀಲಾಗೆ (Sreeleela) ಬಾಲಿವುಡ್ ಬಾಗಿಲು ತೆರೆದಿದೆ. ಸೌತ್‌ನಲ್ಲಿ ಬೇಡಿಕೆಯ ನಟಿಯಾಗಿರುವ ಶ್ರೀಲೀಲಾಗೆ ಈಗ ಬಿಟೌನ್‌ನಲ್ಲಿ ಬಂಪರ್ ಆಫರ್ ಸಿಕ್ಕಿದೆ. ವರುಣ್ ಧವನ್ (Varun Dhawan) ಜೊತೆ ಡ್ಯುಯೆಟ್ ಹಾಡೋಕೆ ರೆಡಿಯಾಗಿದ್ದಾರೆ.
ಶ್ರೀಲೀಲಾ ಬ್ಯೂಟಿ ಜೊತೆ ಪ್ರತಿಭೆ ಇರುವ ಕಲಾವಿದೆ. ಡ್ಯಾನ್ಸ್‌ನಲ್ಲೂ ಎತ್ತಿದ ಕೈ. ಹೀಗೆ ಎಲ್ಲದಕ್ಕೂ ಸೈ ಎನ್ನುತ್ತಿರುವ ನಟಿಯ ಮೇಲೆ ಬಾಲಿವುಡ್ ಮಂದಿಯ ಕಣ್ಣು ಬಿದ್ದಿದೆ. ವರುಣ್ ಧವನ್ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ನಟಿಸಲು ಬುಲಾವ್ ಬಂದಿದೆ.
ನಟಿ ಕೂಡ ಕಥೆ ಕೇಳಿ ಥ್ರಿಲ್ ಆಗಿದ್ದಾರಂತೆ. ಈ ಚಿತ್ರದ ಭಾಗವಾಗ್ತಾರಾ? ಕಾಯಬೇಕಿದೆ. ಇದೇ ಚಿತ್ರದಲ್ಲಿ ಮತ್ತೊಬ್ಬ ನಟಿ ಮೃಣಾಲ್ ಠಾಕೂರ್ (Mrunal Thakur) ಕಾಣಿಸಿಕೊಳ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಕುಂದಾಪುರಕ್ಕೆ ಬಂದ ‘ಕಲ್ಕಿ’ ಬುಜ್ಜಿ ಜೊತೆ ರಿಷಬ್ ಶೆಟ್ಟಿ ರೌಂಡ್ಸ್
ಇದೊಂದು ಪಕ್ಕಾ ಕಾಮಿಡಿ ಡ್ರಾಮಾ ಸಿನಿಮಾ ಆಗಿದ್ದು, ವರುಣ್ ತಂದೆ ಡೇವಿಡ್ ಧವನ್ ನಿರ್ದೇಶನ ಮಾಡಲಿದ್ದಾರೆ. ಜುಲೈ ಕೊನೆಯಲ್ಲಿ ಶೂಟಿಂಗ್ ಶುರುವಾಗಲಿದ್ದು, ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ಸಿನಿಮಾ ರಿಲೀಸ್ ಆಗಲಿದೆ.
ಅಂದಹಾಗೆ, ನಿತಿನ್ ಜೊತೆ ‘ರಾಬಿನ್‌ಹುಡ್’ ಸಿನಿಮಾ ಮಾಡುತ್ತಿರೋದು ಅಧಿಕೃತ ಘೋಷಣೆ ಆಗಿದೆ. ರವಿತೇಜ ಜೊತೆ ಸಿನಿಮಾಗೆ ಚಾಲನೆ ಸಿಕ್ಕಿದೆ. ಪವನ್ ಕಲ್ಯಾಣ್ ಜೊತೆಗಿನ ಉಸ್ತಾದ್ ಭಗತ್ ಸಿಂಗ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಕನ್ನಡದ ‘ಜ್ಯೂನಿಯರ್’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲು ಸಿದ್ಧತೆ ಮಾಡಿಕೊಳ್ತಿದೆ ಚಿತ್ರತಂಡ.
ಅದಷ್ಟೇ ಅಲ್ಲ, ತಮಿಳಿನ ಅಜಿತ್ ಕುಮಾರ್ ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಸಿನಿಮಾಗೂ ಶ್ರೀಲೀಲಾ ನಾಯಕಿ ಎನ್ನಲಾಗಿದೆ. ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಅಲಿ ಖಾನ್ ನಟನೆಯ ಹೊಸ ಸಿನಿಮಾಗೂ ಇವರೇ ಹೀರೋಯಿನ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಟ್ನಲ್ಲಿ ಶ್ರೀಲೀಲಾಗೆ ಚಿತ್ರರಂಗದಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿಯಾಗಿರೋದು ಗ್ಯಾರಂಟಿ.