ಮುಂಬೈ: ಏಷ್ಯಾಕಪ್ಗಾಗಿ ದುಬೈಗೆ ಪ್ರಯಾಣ ಬೆಳೆಸಲು ಮುಂಬೈ ಏರ್ಪೋರ್ಟ್ಗೆ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಲ್ ಆಗಮಿಸುತ್ತಿದ್ದಂತೆ ಅವರೊಂದಿಗೆ ಪತ್ನಿ ಧನಶ್ರೀ ಕೂಡ ಕಾಣಿಸಿಕೊಂಡಿದ್ದಾರೆ.
ಕೆಲದಿನಗಳಿಂದ ಚಹಲ್ ಮತ್ತು ಧನಶ್ರೀ ನಡುವೆ ಒಡಕು ಮೂಡಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಪೂರಕವಾಗಿ ಸಾಮಾಜಿಕ ಜಾಲತಾಣದಲ್ಲಿ ಇವರಿಬ್ಬರು ಹಾಕಿದ್ದ ಪೋಸ್ಟ್ಗಳು ಅನುಮಾನ ಮೂಡಿಸಿತ್ತು. ಇದನ್ನೂ ಓದಿ: ಚಹಲ್-ಧನಶ್ರೀ ದಾಂಪತ್ಯ ಜೀವನದಲ್ಲಿ ಬಿರುಕು ರೂಮರ್ಸ್ಗೆ ಟ್ವಿಸ್ಟ್
ಇದೀಗ ಚಾಹಲ್ ಮತ್ತು ಧನಶ್ರೀ ಏರ್ಪೋರ್ಟ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಚಾಹಲ್ ಜೊತೆ ಕಾಲಿಗೆ ಪ್ಲಾಸ್ಟರ್ ಹಾಕಿಕೊಂಡು ಬಂದ ಧನಶ್ರೀ ಬಳಿಕ ಫೋಟೋಗೆ ಪೋಸ್ ನೀಡಿದ್ದಾರೆ. ಈ ಮೂಲಕ ಅವರಿಬ್ಬರ ದಾಂಪತ್ಯ ಜೀವನದ ಕುರಿತಾಗಿ ಎದ್ದಿದ್ದ ರೂಮರ್ಸ್ಗಳಿಗೆ ತೆರೆಎಳೆದಿದ್ದಾರೆ.
ಚಹಲ್ ಕೆಲದಿನಗಳ ಹಿಂದೆ ಹೊಸ ಜೀವನ ಆರಂಭ ಎಂದು ಪೋಸ್ಟ್ ಹಾಕಿಕೊಂಡಿದ್ದರು. ಅದೇ ಸಮಯಕ್ಕೆ ಧನಶ್ರೀ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿದ್ದ ಸರ್ ನೇಮ್ ಚಹಲ್ ಪದವನ್ನು ಕಿತ್ತುಹಾಕಿ ಧನಶ್ರೀ ವರ್ಮಾ ಎಂದು ಬದಲಾವಣೆ ಮಾಡಿಕೊಂಡಿದ್ದರು. ಇದನ್ನು ಗಮನಿಸಿದ ಅಭಿಮಾನಿಗಳು ಇವರಿಬ್ಬರ ದಾಂಪತ್ಯ ಜೀವನ ಮುರಿದುಬಿದ್ದಿದೆ ಎಂಬ ವದಂತಿ ಹರಿದಾಡಿತ್ತು. ಇದನ್ನೂ ಓದಿ: ರಾಹುಲ್ ದ್ರಾವಿಡ್ಗೆ ಕೊರೊನಾ- ಏಷ್ಯಾ ಕಪ್ ಟೂರ್ನಿಯಿಂದ ಹೊರಕ್ಕೆ
ಈ ಬಗ್ಗೆ ಕೆಲದಿನಗಳ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಧನಶ್ರೀ ಬರೆದುಕೊಂಡು ಸ್ಪಷ್ಟನೆ ನೀಡಿದ್ದರು. ಕಳೆದ 14 ದಿನಗಳಿಂದ ತುಂಬಾ ಕಷ್ಟದ ದಿನವನ್ನು ಅನುಭವಿಸುತ್ತಿದ್ದೆ. ಡ್ಯಾನ್ಸ್ ಮಾಡುವಾಗ ಬಿದ್ದು ಕಾಲು ಮುರಿತಕ್ಕೊಳಗಾಗಿತ್ತು. ಆ ಬಳಿಕ ಚಿಕಿತ್ಸೆ ಪಡೆದು ಇದೀಗ ಚೇತರಿಕೆ ಕಾಣುತ್ತಿದೆ. ಈ ಕಷ್ಟದ ಸಮಯದಲ್ಲಿ ನನ್ನೊಂದಿಗೆ ನನ್ನ ಕುಟುಂಬದವರು, ಮನೆಯವರು ಮತ್ತು ನನ್ನ ಗಂಡ ಧೈರ್ಯ ತುಂಬಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆ ಬಳಿಕ ಮತ್ತೆ ನೃತ್ಯದತ್ತ ಗಮನ ಹರಿಸಲು ಮುಂದಾಗುತ್ತೇನೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ಗೆ ಚಹಲ್ ಕಾಮೆಂಟ್ ಮಾಡಿದ್ದು, ನನ್ನ ಮಹಿಳೆ ಎಂದು ಅಧಿಕೃತ ಖಾತೆಯಿಂದ ಕಾಮೆಂಟ್ ಹಾಕಿದ್ದರು. ಈ ಮೂಲಕ ಕೆಲದಿನಗಳಿಂದ ಹರಿದಾಡುತ್ತಿದ್ದ ದಾಂಪತ್ಯ ಜೀವನದಲ್ಲಿ ಬಿರುಕು ಸುದ್ದಿಗೆ ಅಂತ್ಯ ಹಾಡಲು ಮುಂದಾಗಿದ್ದರು. ಇದೀಗ ಒಟ್ಟಿಗೆ ಕಾಣಿಸಿಕೊಂಡು ಅಭಿಮಾನಿಗಳಿಗೆ ಸಂತಸ ತರಿಸಿದ್ದಾರೆ.
View this post on Instagram