– 4.75 ಕೋಟಿ ಜೀವನಾಂಶ ಕೊಡಲು ಒಪ್ಪಿದ ಕ್ರಿಕೆಟಿಗ
ಮುಂಬೈ: ಸುದೀರ್ಘ ಕಾನೂನು ಹೋರಾಟದ ಬಳಿಕ ನೃತ್ಯ ಸಂಯೋಜಕಿ ಧನಶ್ರೀ ವರ್ಮಾ (Dhanashree Verma) ಮತ್ತು ಕ್ರಿಕೆಟಿಗ ಯಜುವೇಂದ್ರ ಚಾಹಲ್ (Yuzvendra Chahal) ವಿಚ್ಛೇದನ ಪಡೆದುಕೊಂಡಿದ್ದಾರೆ. ಇವರಿಬ್ಬರು ಪರಸ್ಪರ ಒಪ್ಪಿಗೆಯಿಂದ ಸಲ್ಲಿಸಿದ್ದ ವಿಚ್ಛೇದನ ಕೋರಿ ಸಲ್ಲಿಸಿದ್ದ ಜಂಟಿ ಅರ್ಜಿಯನ್ನು ಗುರುವಾರ ಬಾಂದ್ರಾ ಕೌಟುಂಬಿಕ ನ್ಯಾಯಾಲಯ ಪುರಸ್ಕರಿಸಿದೆ.
ಇಬ್ಬರೂ ಗುರುವಾರ ಬಾಂದ್ರಾ ಕೌಟುಂಬಿಕ ನ್ಯಾಯಾಲಯದ (Bandra family court) ಮುಂದೆ ಹಾಜರಾಗಿದ್ದರು. ಈ ವೇಳೆ ಅರ್ಜಿ ಪುರಸ್ಕರಿಸಿದ ಕೋರ್ಟ್ ವಿಚ್ಛೇದನ ಮಂಜೂರು ಮಾಡಿ ತೀರ್ಪು ಪ್ರಕಟಿಸಿದೆ ಎಂದು ಚಾಹಲ್ ಪರ ವಕೀಲ ನಿತಿನ್ ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ 2025: ಮೊದಲ 3 ಪಂದ್ಯಗಳಿಗೆ ರಾಜಸ್ಥಾನ ರಾಯಲ್ಸ್‌ಗೆ ರಿಯಾನ್ ಪರಾಗ್ ಕ್ಯಾಪ್ಟನ್
ಚಾಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2022ರ ಜೂನ್‌ನಿಂದಲೇ ಅವರು ಬೇರ್ಪಟ್ಟಿದ್ದರು. ಈ ವರ್ಷದ ಫೆ.5ರಂದು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೇ ಮಾ.22ರಿಂದ ಚಾಹಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸುತ್ತಿರುವ ಕಾರಣದಿಂದಾಗಿ ಗುರುವಾರದ ಒಳಗೆ ಅರ್ಜಿ ವಿಚಾರಣೆ ಮುಗಿಸುವಂತೆ ಬಾಂಬೆ ಹೈಕೋರ್ಟ್ ಬುಧವಾರ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು. ಅದಂತೆ ಇಂದು ವಿಚ್ಛೇದನ ಅಂತಿಮಗೊಳಿಸಲಾಗಿದೆ. ಇದನ್ನೂ ಓದಿ: IPl 2025 | ರನ್ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ
ಧನಶ್ರೀಗೆ ಸಿಗುವ ಜೀವನಾಂಶ ಎಷ್ಟು?
ವಿಚ್ಛೇದನ ಬಳಿಕ ಧನಶ್ರೀ ಅವರು ಚಾಹಲ್‌ರಿಂದ ಒಟ್ಟು 4.75 ಕೋಟಿ ಜೀವನಾಂಶ ಪಡೆಯಲಿದ್ದಾರೆ. ಈಗಾಗಲೇ ಮೊದಲ ಕಂತಿನಲ್ಲಿ 2.37 ಕೋಟಿ ರೂ.ಗಳನ್ನ ಪಾವತಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಈ ಬಾರಿಯೂ ಆರ್‌ಸಿಬಿ ಬೆಂಗಳೂರು ಪಂದ್ಯಗಳ ಟಿಕೆಟ್ ದರ ದುಬಾರಿ