ಮುಂಬೈ: ಟೀಂ ಇಂಡಿಯಾ ಸ್ಟಾರ್ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ (Yuzvendra Chahal) ಅವರು ಪತ್ನಿ ಧನಶ್ರೀ ವರ್ಮಾಗೆ (Dhanashree Verma) ಡಿವೋರ್ಸ್ ಕೊಡಲಿದ್ದಾರೆ ಎಂಬ ವದಂತಿ ಬಗ್ಗೆ ಧನಶ್ರೀ ಮೌನ ಮುರಿದಿದ್ದಾರೆ.
Advertisement
2020ರ ಡಿಸೆಂಬರ್ 22ರಂದು ಉತ್ತರ ಪ್ರದೇಶದ ಗುರುಗ್ರಾಮ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚಹಲ್-ಧನಶ್ರೀ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ವದಂತಿ ಜಾಲತಾಣದಲ್ಲಿ ಸದ್ದು ಮಾಡುತ್ತಲೇ ಇತ್ತು. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಧನಶ್ರೀ ವಂದತಿ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಡಿವೋರ್ಸ್ ಆದ್ರೆ ಚಹಲ್ ಧನಶ್ರೀಗೆ ಎಷ್ಟು ಜೀವನಾಂಶ ಕೊಡಬೇಕು? ಇಬ್ಬರ ಸಂಪತ್ತು ಎಷ್ಟಿದೆ?
Advertisement
Advertisement
ನಾನು, ನನ್ನ ಕುಟುಂಬದ ಸದಸ್ಯರು ಕಳೆದ ಕೆಲ ದಿನಗಳಿಂದ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಕೆಲವರು ಸತ್ಯ ತಿಳಿಯದೇ ಸುಳ್ಳು ಸುಳ್ಳನ್ನೇ ಬರೆಯುತ್ತಿದ್ದಾರೆ. ನನ್ನ ಖ್ಯಾತಿಗೆ ಕಳಂಕ ತರಲು ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷ ಹರಡುವ ಟ್ರೋಲ್ಗಳನ್ನು ಮಾಡುತ್ತಿದ್ದಾರೆ. ಹಲವು ವರ್ಷಗಳ ಕಾಲ ಶ್ರಮಿಸಿದ ನಂತರವೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ನಾನು ಮೌನವಾಗಿದ್ದ ಮಾತ್ರಕ್ಕೆ, ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದಿದ್ದಾರೆ. ಇದನ್ನೂ ಓದಿ: ಚಹಲ್, ಧನಶ್ರೀ ದಾಂಪತ್ಯದಲ್ಲಿ ಬಿರುಕು – ಮದ್ವೆಯಾಗಿ 4 ವರ್ಷದ ಬಳಿಕ ಡಿವೋರ್ಸ್?
Advertisement
ಮುಂದುವರಿದು… ಇತರರಿಗೆ ಸಹಾನುಭೂತಿ ತೋರಿಸಲು ಧೈರ್ಯ ಬೇಕು. ನೈಜ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮೌಲ್ಯಗಳೊಂದಿಗೆ ಮುಂದುವರಿಯುವುದರಲ್ಲಿ ನಾನು ನಂಬಿಕೆ ಇಡುತ್ತೇನೆ. ಇಲ್ಲಿ ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ. ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಸಾಕ್ಷ್ಯಗಳಿಲ್ಲಿದ್ರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ ಎಂದು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಧನಶ್ರೀ ಅವರ ಈ ಪೋಸ್ಟ್ ಬಳಿಕ ಇನ್ನಷ್ಟು ಚರ್ಚೆಗಳು ಹುಟ್ಟಿಕೊಂಡಿವೆ. ಏಕೆಂದರೆ ಈ ಪೋಸ್ಟ್ನಲ್ಲಿ ಚಹಲ್ ಜೊತೆಗಿನ ಸಂಬಂಧ ಮುಂದುವರಿಸುವುದಾಗಿ ಅವರು ಸ್ಪಷ್ಟನೆ ನೀಡಿಲ್ಲ. ಚಹಲ್ ಹೆಸರನ್ನೂ ಪ್ರಸ್ತಾಪಿಸಿಲ್ಲ ಎಂದು ನೆಟ್ಟಿಗರು ಚರ್ಚಿಸಿದ್ದಾರೆ.