ಸೋಷಿಯಲ್ ಮೀಡಿಯಾದಲ್ಲಿ ಕಳೆದ ಕೆಲ ದಿನಗಳಿಂದ ಸೆಲೆಬ್ರಿಟಿ ಜೋಡಿ ಯಜುವೇಂದ್ರ ಚಾಹಲ್ ಮತ್ತು ಧನಶ್ರೀ ಡಿವೋರ್ಸ್ ವದಂತಿ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಇದೀಗ ಈ ಎಲ್ಲಾ ಊಹಾಪೋಹಗಳಿಗೂ ಈ ಜೋಡಿ ಸ್ಪಷ್ಟನೆ ನೀಡಿದೆ.
ಕ್ರಿಕೆಟಿಗ ಯಜುವೇಂದ್ರ ಚಾಹಲ್ ಮತ್ತು ಧನಶ್ರೀ ಕಳೆದ ಎರಡು ವರ್ಷಗಳಿಂದ ಹಿಂದೆ ಹಸೆಮಣೆ ಏರಿದ್ದರು. ಖುಷಿಯಿಂದ ಜೀವನ ಸಾಗಿಸುತ್ತಿದ್ದ ಈ ಜೋಡಿಯ ಬಗ್ಗೆ ಡಿವೋರ್ಸ್ ವಿಚಾರವಾಗಿ ದೊಡ್ಡ ಮಟ್ಟದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಮಾಡತ್ತು. ಇದಕ್ಕೆಲ್ಲ ಕಾರಣವು ಇದೆ. ಇದನ್ನೂ ಓದಿ:ಎರಡನೇ ಮದುವೆ ವದಂತಿಯ ಬಗ್ಗೆ ಮೇಘನಾ ರಾಜ್ ಸ್ಪಷ್ಟನೆ
ಧನಶ್ರೀ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಿಂದ ಚಾಹಲ್ ಸರ್‌ನೇಮ್ ತೆಗೆದು ಹಾಕಿದ್ದರು. ಯಜುವೇಂದ್ರ ಕೂಡ ಹೊಸ ಜೀವನ ಆರಂಭ ಎಂದು ಬರೆದುಕೊಂಡಿದ್ದರು. ಹಾಗಾಗಿ ಸೋಷಿಯಲ್ ಮೀಡಿಯಾದಲ್ಲಿ ಇವರಿಬ್ಬರ ಡಿವೋರ್ಸ್ ವಿಚಾರ ಸಖತ್ ಸೌಂಡ್ ಮಾಡಿತ್ತು. ಜತೆಗೆ ಟ್ವೀಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿತ್ತು. ಇದೀಗ ದಂಪತಿಗಳಿಬ್ಬರು ವೀಡಿಯೋ ಮೂಲಕ ಡಿವೋರ್ಸ್ ವದಂತಿಗೆ ಅಂತ್ಯ ಹಾಡಿದ್ದಾರೆ. ಇದನ್ನೂ ಓದಿ:ಎರಡನೇ ಮದುವೆ ವದಂತಿಯ ಬಗ್ಗೆ ಮೇಘನಾ ರಾಜ್ ಸ್ಪಷ್ಟನೆ
ವೀಡಿಯೋದಲ್ಲಿ ಧನಶ್ರೀ ಒಂದು ತಿಂಗಳು ನಾನು ಮನೆಗೆ ಹೋಗುತ್ತೇನೆ ಎಂದು ಚಾಹಲ್‌ಗೆ ಹೇಳುತ್ತಾರೆ. ಆಗ ಅವರು ಖುಷಿಯಿಂದ ಡ್ಯಾನ್ಸ್ ಮಾಡುತ್ತಾರೆ. ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ. ಇವರಿಬ್ಬರ ಖುಷಿ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ. ಈ ಮೂಲಕ ಡಿವೋರ್ಸ್ ವದಂತಿಗೆ ಫುಲ್ ಸ್ಟಾಪ್ ಬಿದ್ದಿದೆ.