ಚಿಕ್ಕಮಗಳೂರು: ಮೂಡಿಗೆರೆ ಧನ್ಯಶ್ರೀ ಪ್ರಕರಣದ ಪ್ರಮುಖ ಆರೋಪಿ ಸಂತೋಷ್‍ನನ್ನು ಚಿಕ್ಕಮಗಳೂರು ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿದ್ದಾರೆ.
ಧನ್ಯಶ್ರೀ ಜೊತೆ ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದ ಸಂತೋಷ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಕಜೇಕಾರ್ ಗ್ರಾಮದವನೆಂದು ತಿಳಿದು ಬಂದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ಊರನ್ನು ಬಿಟ್ಟು ತಲೆಮರೆಸಿಕೊಂಡಿದ್ದ ಸಂತೋಷ್ ನನ್ನು ಮೂಡಿಗೆರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಕರೆತಂದಿದ್ದಾರೆ. ಧನ್ಯಶ್ರೀ ಜೊತೆ ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದ ಸಂತೋಷ್, ಅದನ್ನು ಸ್ಕ್ರೀನ್ ಶಾಟ್ ತೆಗೆದು ಹಿಂದೂಪರ ಸಂಘಟನೆಗಳ ಗ್ರೂಪ್ ಗೆ ಹಾಕಿದ್ದನು. ಅಲ್ಲದೇ ಕರೆ ಮಾಡಿ ಧನ್ಯಶ್ರೀ ಹಾಗೂ ತಾಯಿ ಸರಸ್ವತಿಗೆ ಧಮ್ಕಿ ಹಾಕಿದ್ದನು.
Advertisement
Advertisement
ಏನಿದು ಪ್ರಕರಣ: ಕಳೆದ ಕೆಲ ದಿನಗಳ ಹಿಂದೆ ಬಿಕಾಂ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಳು. ಈ ಪ್ರಕರಣದಲ್ಲಿ ಯುವತಿ ಆತ್ಮಹತ್ಯಗೆ ಮಾಡಿಕೊಳ್ಳುವ ನೈತಿಕ ಪೊಲೀಸ್‍ಗಿರಿ ಕಾರಣ ಎಂದು ತಿಳಿದು ಬಂದಿತ್ತು.
Advertisement
ಧನ್ಯಶ್ರೀ ಆತ್ಮಹತ್ಯೆ ನಂತರ ಪ್ರಕರಣದಲ್ಲಿ ಹಲವು ಬೆಳವಣಿಗೆಗಳು ಕಾಣಿಸಿಕೊಂಡಿದ್ದವು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಅವರು, ಪೊಲೀಸ್ ಇಲಾಖೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡ್ತಿರೋ ಸಂಘಟನಾಕಾರರು ಹಾಗೂ ವ್ಯಕ್ತಿಗಳ ಬಗ್ಗೆ ಹಾವಿನ ಜೊತೆ ಸರಸವಾಡಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಅಲ್ಲದೇ ಮೃತ ಧನ್ಯಶ್ರೀಗೆ ಸಂತೋಷ್ ಸೇರಿದಂತೆ ಐವರು ಸಂಘಟನೆ ಕಾರ್ಯಕರ್ತರು ಧಮ್ಕಿ ಹಾಕಿದ್ದ ಹಿನ್ನೆಲೆಯಲ್ಲಿ ಧನ್ಯಶ್ರೀ ಸಾವಿಗೂ ಮುನ್ನ 36 ಗಂಟೆ ಏನನ್ನೂ ತಿನ್ನದೆ ಖಾಲಿ ಹೊಟ್ಟೆ ಇದ್ದದ್ದು ಮರಣೋತ್ತರ ಪರೀಕ್ಷೆಯಿಂದ ಧೃಡಪಟ್ಟಿದೆ ಎಂದು ಹೇಳಿದ್ದರು. ಓದಿ: ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಗ್ಯಾರಂಟಿ-ವಾರ್ನಿಂಗ್ ಮೆಸೇಜ್ ವೈರಲ್
ಧನ್ಯಶ್ರೀ ಮನೆಗೆ ಐವರು ಸಂಘಟನಾಕಾರರು ಎರಡು ಬಾರಿ ಹೋಗಿ ಬಂದಿರೋ ದಾಖಲೆ ಇದೆ. ಅವರ ಮನೆಗೆ ಹೋಗಿ ಹೆತ್ತವರ ಎದುರೇ ಸೊಂಟದ ಕೆಳಗಿನ ಭಾಷೆಯಲ್ಲಿ ಬಾಯಿಗೆ ಬಂದಂತೆ ಬಯ್ದಿರೋದು ಗೊತ್ತಾಗಿದೆ. ಎರಡು, ಮೂರು, ನಾಲ್ಕನೇ ತಾರೀಖು ಬೋಲ್ಡ್ ಆಗಿದ್ದ ಧನ್ಯಶ್ರೀ ಐದನೇ ತಾರೀಖು, ಐವರು ಎರಡು ಬಾರಿ ಮನೆಗೆ ಬಂದುಹೋದ ಮೇಲೆ ಆಕೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರಕರಣದಲ್ಲಿ ಯಾರೇ ಇರಲಿ, ಎಷ್ಟೆ ದೊಡ್ಡ ವ್ಯಕ್ತಿಗಳೇ ಬರಲಿ, ಎಷ್ಟೆ ಒತ್ತಡ ಬಂದರು ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: ನೇಣು ಬಿಗಿದುಕೊಂಡು ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ- ಸಾವಿಗೂ ಮುನ್ನ ಐ ಲವ್ ಮುಸ್ಲಿಮ್ಸ್ ಎಂದು ಮೆಸೇಜ್ ಮಾಡಿದ್ದ ಯುವತಿ
https://www.youtube.com/watch?v=RFSQfZFZs4Y
https://youtu.be/H8lL8K6TcM8