ವಿಜಯಪುರ: ಮಾಜಿ ಸಿಎಂ ಧರಂಸಿಂಗ್ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.
ಇಂದು ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಧರಂ ಸಿಂಗ್ ಹಲವು ವರ್ಷಗಳ ಸ್ನೇಹಿತರು. ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಧರಂಸಿಂಗ್ ಒಬ್ಬ ಒಳ್ಳೆಯ ನಾಯಕ. ಅವರು ಮೊದಲ ಬಾರಿಗೆ ಶಾಸಕರಾದಾಗ ನಾನು ವಿರೋಧ ಪಕ್ಷದ ನಾಯಕನಾಗಿದ್ದೆ. ಅವರು ಉತ್ತಮ ಆಡಳಿತಗಾರರು ಅಂತಾ ಹೇಳಿದ್ರು.
Advertisement
ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನ ಭಗವಂತ ನೀಡಲಿ ಅಂತಾ ಸಂತಾಪ ಸೂಚಿಸಿದ್ರು.
Advertisement
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
Advertisement
ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಸತತ 7 ಬಾರಿ ಚುನಾಯಿತರಾಗಿದ್ದ ಇವರು 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.
Advertisement
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ ಮೊದಲಾದ ಖಾತೆಗಳನ್ನು ನಿರ್ವಹಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು.