ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Dr. D Veerendra Heggade) ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆಯ ಆದೇಶ ನೀಡಿದೆ.
Advertisement
Advertisement
ಸೌಜನ್ಯ (Soujanya Case) ಅತ್ಯಾಚಾರ, ಹತ್ಯೆಯ ಮರು ತನಿಖೆಗೆ ಒತ್ತಾಯಿಸಿ ಸಭೆ, ಪ್ರತಿಭಟನೆಗಳು ನಡೆಯುತ್ತಿದೆ. ಈ ವೇಳೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ದುರ್ಮರಣ
Advertisement
Advertisement
ಶ್ರೀ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಬಗ್ಗೆ ಸಾಕಷ್ಟು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಹಲವು ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿದೆ. ಆದರೂ ಹೇಳಿಕೆಗಳನ್ನು ಮುಂದುವರಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ (Mahesh Shetty Thimarodi) ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.
ಇನ್ನು ಮುಂದೆ ಅವಹೇಳನಕಾರಿ ಹೇಳಿಕೆ ನೀಡದಂತೆ ಆದೇಶಿಸಿದ ಹೈಕೋರ್ಟ್ (HighCourt), ಸರ್ಕಾರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಸೂಚಿಸಿದ್ದು, ಕೋರ್ಟ್ ಆದೇಶ ಉಲ್ಲಂಘಿಸದಂತೆ ಎಚ್ಚರ ವಹಿಸಲು ಸೂಚಿಸಿದೆ.
Web Stories