ಧರ್ಮ ದಂಗಲ್‌ನಿಂದ ರಾಜ್ಯಕ್ಕೆ ಹೊಡೆತ ಇಲ್ಲ: ಬೊಮ್ಮಾಯಿ

Public TV
1 Min Read
Basavaraj Bommai 1

ಉಡುಪಿ: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್‌ನಿಂದ ಕೈಗಾರಿಕೆಗಳಿಗೆ, ಹೊಸ ಉದ್ದಿಮೆಗಳಿಗೆ ಹಾಗೂ ಐಟಿ ಸೆಕ್ಟರ್‌ಗಳಿಗೆ ಹೊಡೆತ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಣಿಪಾಲದಲ್ಲಿ ಮಾತನಾಡಿ, ಪ್ರಸಕ್ತ ವಿದ್ಯಮಾನಗಳಿಂದ ಯಾವುದೇ ತೊಂದರೆ ಆಗಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಧರ್ಮ ಸಂಘರ್ಷದಿಂದ ಉದ್ದಿಮೆಗಳಿಗೆ ಹಿನ್ನಡೆ ಆಗುವುದಿಲ್ಲ. ಕೈಗಾರಿಕೆಗೆ ಸಮಸ್ಯೆಯಾಗುತ್ತದೆ ಎಂಬುದು ಸುಳ್ಳು. ರಾಜ್ಯದ ಪ್ರಸಕ್ತ ಬೆಳವಣಿಗೆಗಳಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಖ್ಯಾತ ಯಕ್ಷಗಾನ ಭಾಗವತ ಬಲಿಪ ಪ್ರಸಾದ ನಿಧನ

BOMMAI 6

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅತಿ ಹೆಚ್ಚು ಎಫ್‌ಡಿಐ ಹೂಡಿಕೆ ನಮ್ಮ ರಾಜ್ಯಕ್ಕೆ ಬರುತ್ತಿದೆ. ಈ ಕ್ವಾರ್ಟರ್‌ನಲ್ಲಿ ದೇಶದ ಶೇ.43 ರಷ್ಟು ಹೂಡಿಕೆ ನಮ್ಮ ರಾಜ್ಯಕ್ಕೆ ಬಂದಿದೆ. ಪ್ರಪಂಚದ ಮೂಲೆಮೂಲೆಗಳಿಂದ ಹೂಡಿಕೆದಾರರು ಬರುತ್ತಿದ್ದಾರೆ. ಕೈಗಾರಿಕೆಗಳು ನಮ್ಮ ರಾಜ್ಯ ತೊರೆಯುವ ಪ್ರಶ್ನೆಯೇ ಇಲ್ಲ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಯಥೇಚ್ಛವಾಗಿದೆ. ಮೂಲಸೌಕರ್ಯದ ಗುಣಮಟ್ಟ ಬಹಳ ಚೆನ್ನಾಗಿದೆ. ದೇಶದ ಟಾಪ್ ಸಂಶೋಧನಾ ಮತ್ತು ಅಭಿವೃದ್ಧಿ(ಆರ್‌ಆಂಡ್‌ಡಿ) ಕೇಂದ್ರಗಳು ನಮ್ಮಲ್ಲಿದೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ನಾನು ಮಾತನಾಡಲ್ಲ, ನನ್ನ ಆಕ್ಷನ್ ಮಾತನಾಡುತ್ತದೆ: ವಿಪಕ್ಷಗಳಿಗೆ ಬೊಮ್ಮಾಯಿ ತಿರುಗೇಟು

ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳು ಉದ್ಯಮಿಗಳಿಗೆ ಆಫರ್ ನೀಡುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಅಂಗಡಿಗಳಲ್ಲಿ ವ್ಯಾಪಾರ ಇಲ್ಲದಾಗ ಆಫರ್ ಕೊಡುವುದಿಲ್ಲವೇ? ಆ ರಾಜ್ಯಗಳಿಗೆ ಯಾವುದೇ ಬೇಡಿಕೆ ಇಲ್ಲ. ಆಫರ್ ಕೊಟ್ಟು ಕರೆಯುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಉದ್ದಿಮೆಗಳನ್ನು, ಕೈಗಾರಿಕೆಗಳನ್ನು ಆರಂಭ ಮಾಡಲು ಹಲವಾರು ಕಂಪನಿಗಳು ಉತ್ಸುಕರಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *