ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ ಇದೀಗ ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಕರ್ನಾಟಕ ರಾಜ್ಯ ಡಿಜಿಪಿ ಆದೇಶ ಹೊರಡಿಸಿದ್ದು, ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ ತನಿಖೆಗಾಗಿ ರಚಿಸಿದ್ದ ಎಸ್‌ಐಟಿ ತಂಡಕ್ಕೆ ಹೆಚ್ಚುವರಿಯಾಗಿ 20 ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದಾರೆ. ಈ ತಂಡ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತನಿಖೆ ನಡೆಸಲಿದೆ.ಇದನ್ನೂ ಓದಿ: ಸೈಬರ್ ದಾಳಿಗೆ 158 ವರ್ಷದ ಹಳೆಯ ಕಂಪನಿ ಬಂದ್ – 700 ಮಂದಿ ಮನೆಗೆ
ಹೆಚ್ಚುವರಿಯಾಗಿ ನೇಮಕಗೊಂಡಿರುವ ಅಧಿಕಾರಿಗಳಲ್ಲಿ, ಮಂಗಳೂರು ಡಿಸಿಆರ್‌ಇ ಎಸ್ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ, ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್ ಇ.ಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್‌ಪೆಕ್ಟರ್ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಆರ್.ಸುಹಾಸ್, ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್‌ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್,
ಮಂಗಳೂರು ಮೆಸ್ಕಾಂ ಸಬ್‌ಇನ್ಸ್‌ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೇಬಲ್ ದೇವರಾಜ್ ಅವರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ. ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರೋ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ, ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ.
ಧರ್ಮಸ್ಥಳದ ಎಸ್‌ಐಟಿ ತನಿಖೆ ಹೇಗಿರಲಿದೆ?
ಮೊದಲು ಎಫ್‌ಐಆರ್ ಮತ್ತು 164 ಅಡಿ ಹೇಳಿಕೆ ಪ್ರತಿ ಅತ್ಯಗತ್ಯ. ಬಳಿಕ ಜಡ್ಜ್ ಮುಂದೆ ಕೊಟ್ಟ ಹೇಳಿಕೆ ಮಾಹಿತಿ ಪಡೆಯಲಿದೆ ಎಸ್‌ಐಟಿ. ನಂತ್ರ ಹೇಳಿಕೆ ನೀಡಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಸದ್ಯ ಸಿಕ್ಕಿರೋ ಅಸ್ಥಿಪಂಜರದ ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆ ನಡೆಯಲಿದೆ. ಇದಾದಮೇಲೆ ಬಾಕಿ ಉಳಿದಿರೋ ಅಸ್ಥಿಪಂಜರ ಹುಡುಕಾಟಕ್ಕೆ ಎಸ್‌ಐಟಿ ಮುಂದಾಗಲಿದೆ. ತನಿಖೆ ಬಳಿಕ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಕೆ ಮಾಡಲಿದೆ.ಇದನ್ನೂ ಓದಿ: ಪೈಪ್ ಮೇಲಿಂದ ತುಂಗಭದ್ರಾ ಕಾಲುವೆ ದಾಟುವಾಗ ಬಾಲಕಿ ನೀರುಪಾಲು