ಮಂಗಳೂರು: ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಇದೀಗ ಎಸ್‌ಐಟಿ ತಂಡ (SIT) ನೇತ್ರಾವತಿ ನದಿಯ (Netravati) ತಟದಲ್ಲಿ ಸ್ಥಳ ಮಹಜರು ಆರಂಭಿಸಿದೆ.
ಎಸ್‌ಐಟಿ ವಿಚಾರಣೆ ವೇಳೆ ದೂರುದಾರ, ತಲೆ ಬುರುಡೆಯನ್ನು ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಹೊರತೆಗೆದಿರುವುದಾಗಿ ತಿಳಿಸಿದ್ದ. ಈ ಹಿನ್ನೆಲೆ ಎಸ್‌ಐಟಿ ತಂಡವು ಫೊರೆನ್ಸಿಕ್ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸ್ಥಳ ಮಹಜರು ಆರಂಭಿಸಿದ್ದಾರೆ.ಇದನ್ನೂ ಓದಿ: ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಅನ್ಕೋತೀರಿ, ಉಗ್ರರು ದೇಶದೊಳಗೇ ಬೆಳೆದಿರಬಹುದು – ʻಕೈʼ ನಾಯಕ ಚಿದಂಬರಂ ಹೇಳಿಕೆ ವಿವಾದ
ಎಸ್‌ಐಟಿ ಎಸ್ಪಿ ಸಿ.ಎ.ಸೈಮನ್ ಅವರ ನೇತೃತ್ವದಲ್ಲಿ ದೂರುದಾರನನ್ನು ಅಧಿಕಾರಿಗಳು ಸ್ಥಳಕ್ಕೆ ಕರೆತಂದಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು ಕಾರ್ಯ ಆರಂಭವಾಗಿದೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್, ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಸೇರಿ ಇನ್ನಿತರರ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಯುತ್ತಿದೆ.
ಕಳೆದ ಎರಡು ದಿನಗಳಿಂದ ಎಸ್‌ಐಟಿ ತಂಡ ದೂರುದಾರನ ವಿಚಾರಣೆ ನಡೆಸಿದ್ದು, ಸುಮಾರು 14 ಗಂಟೆಗಳ ಕಾಲ ವಿಚಾರಣೆ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇಂದಿನಿಂದ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಿಂದ ಕಾರ್ಯಾಚರಣೆ ನಡೆಸಲಿದ್ದು. ದೂರುದಾರನ ಹೇಳಿಕೆ ಆಧಾರದ ಮೇಲೆ ಪ್ರಣವ್ ಮೊಹಂತಿ ತಂಡ ತನಿಖೆ ಚುರುಕುಗೊಳಿಸಲಿದ್ದಾರೆ.
ಸ್ಥಳ ಮಹಜರು ಬಳಿಕ ದೂರುದಾರನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದ್ದು, ನಂತರ ಆತ ಹೂತ್ತಿದ್ದೇನೆ ಎನ್ನಲಾಗುತ್ತಿರುವ ಪ್ರದೇಶಗಳ ಪರಿಶೀಲನೆ ಮಾಡುವ ಸಾಧ್ಯತೆಯಿದೆ.ಇದನ್ನೂ ಓದಿ: `ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ