Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Bengaluru City

Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Public TV
Last updated: July 20, 2025 11:29 pm
Public TV
Share
3 Min Read
SIT
SHARE

ಬೆಂಗಳೂರು: ಬೇಡದ ಕಾರಣಕ್ಕೆ ಧರ್ಮಸ್ಥಳ (Dharmasthala) ಮತ್ತೆ ಸುದ್ದಿಯಲ್ಲಿದೆ. ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಇದನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ (IPS Officer) ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. SIT ತಂಡ ರಚಿಸಿ ಅರ್ಧ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ.

ಹೌದು. ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ ಅನ್ನೋ ಮಾಹಿತಿ‌ ಉನ್ನತ ಮೂಲಗಳಿಂದ ತಿಳಿದುಬಂದಿದೆ. ತನಿಖೆಯಿಂದ ಹಿಂದೆ ಸರಿಯೋಕೆ ಇಬ್ಬರು ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಈ ಸಂಬಂಧ ಐಪಿಎಸ್‌ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ವೈಯಕ್ತಿಕ ಕಾರಣಗಳನ್ನ ನೀಡಿ ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸೋಮವಾರ (ಜು.21) ಪತ್ರ ಬರೆಯಲು ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

Dharmasthala 3

ಹೊರಬರುತ್ತಾ ನಿಗೂಢ ಸತ್ಯ?
ಕಳೆದ ಜೂನ್ 22ರಂದು ವಕೀರಾದ ಓಜಸ್ವಿ ಗೌಡ ಹಾಗೂ ಸಚಿನ್ ದೇಶಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಹಂಚಿಕೊಂಡಿದ್ದರು. ವ್ಯಕ್ತಿಯೊಬ್ಬ ಶವ ಹೂತಿಟ್ಟ ಪ್ರಕರಣದ ಮಾಹಿತಿಯನ್ನ ಬಹಿರಂಗಗೊಳಿಸಿದ್ದರು..

ಅನಾಮಿಕ ವ್ಯಕ್ತಿಯೊಬ್ಬ ಯಾರದ್ದೊ ಒತ್ತಡಕ್ಕೆ ಹೆದರಿ ನೂರಾರು ಶವ ವಿಲೇವಾರಿ ಮಾಡಿದ್ದಾನೆ ಎನ್ನಲಾದ ಸುದ್ದಿಯು ತೀವ್ರ ಸಂಚಲನಕ್ಕೆ ಕಾರಣವಾಯ್ತು. ಅಲ್ಲದೇ ಆತ ಬೆಳ್ತಂಗಡಿ ಪೊಲೀಸರಿಗೆ (Belthangady Police) ಹೂತಿಟ್ಟಿದ್ದ ತಲೆ ಬುರುಡೆ ತಂದುಕೊಟ್ಟಿದ್ದಾನೆಂಬ ಸುದ್ದಿಯೂ ಹೊರಬಿತ್ತು. ಇದಾದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡರು. ಇದನ್ನು ಇಷ್ಟಕ್ಕೆ ಬಿಡದ ಅನಾಮಿಕ, ಜುಲೈ ಮೂರರಂದು ವಕೀಲರ ಸಹಾಯದೊಂದಿಗೆ ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡಿದ್ದ. ಅದರಲ್ಲಿ ಭಯಾನಕ ಅಂಶಗಳನ್ನು ಉಲ್ಲೇಖಿಸಿದ್ದ.

ಪಾಪಪ್ರಜ್ಞೆ ಕಾಡಿದ ದೂರುದಾರ ಹೇಳಿದ್ದೇನು?
1995ರಿಂದ 2014ರ ವರೆಗೆ ಧರ್ಮಸ್ಥಳದ ನೌಕರನಾಗಿದ್ದೆ. ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು. ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದ್ದರು. ನಾನು ಜೀವಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು. ಹೂತು ಹಾಕಿರುವ ಸ್ಥಳವನ್ನು ತೋರಿಸಲು ನಾನು ಸಿದ್ಧ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ. ಈ ರೀತಿ ಪೊಲೀಸರಿಗೆ ಶವ ವಿಲೇವಾರಿ ಮಾಡಿದ್ದ ಅನಾಮಿಕ ವ್ಯಕ್ತಿ ದೂರು ನೀಡಿದ್ದ. ಅಲ್ಲದೇ ಬೆಳ್ತಂಗಡಿ ನ್ಯಾಯಾಲಯದಲ್ಲೂ ಈ ಸಂಬಂಧ ಹೇಳಿಕೆ ದಾಖಲಿಸಿದ್ದ. ಮುಸುಕುಧಾರಿಯಾಗಿ ಬಂದು ನ್ಯಾಯಾಧೀಶರ ಮುಂದೆ ಪ್ರಕರಣದ ವಿವಿರ ನೀಡಿದ್ದ.

ನ್ಯಾಯಾಧೀಶರ ಮುಂದೆ ಬಿಎನ್‌ಎಸ್ ಸೆಕ್ಷನ್‌ 164 ಅಡಿ ಹೇಳಿಕೆ ದಾಖಲು ಮಾಡಿದ ನಂತ್ರ ಪ್ರಕರಣ ಇನ್ನಷ್ಟು ಕಾವೇರ ತೊಡಗಿತು. ಎಲ್ಲೆಡೆ ಶವ ಹೂತಿಟ್ಟ ವಿಚಾರವೇ ತೀವ್ರ ಚರ್ಚೆಗೆ ಗ್ರಾಸವಾಯ್ತು. ಕೆಲ ಹಿರಿಯ ವಕೀಲರು ಹಾಗೂ ನಿವೃತ್ತ ನ್ಯಾಯಾಧೀಶರು ಕೂಡ ಸಮಗ್ರ ತನಿಖೆಗೆ ಒತ್ತಾಯಿಸಿದ್ದರು. ಕೆಲವರು ಮುಖ್ಯಮಂತ್ರಿಗಳನ್ನ ಖುದ್ದು ಭೇಟಿ ಮಾಡಿ ಆಗ್ರಹಿಸಿದ್ದರು. ಅದರಂತೆ ಸರ್ಕಾರ ಎಸ್‌ಐಟಿ ರಚಿಸಿದೆ. ಹೂತಿಟ್ಟ ಹತ್ಯಾಕಾಂಡ ನಿಜವಾ..? `ಕಂಕಾಳ’ಗಳ ಕರಾಳ ಕಥೆಗಳಿಗೆ ನಿಜಕ್ಕೂ ಆಧಾರ ಉಂಟಾ..? ನೇತ್ರಾವತಿ ತೀರದ ಭಯಾನ`ಕತೆ’ಯ ವಾಸ್ತವತೆ ಏನು..? ಈ ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗಲಿದೆ.

TAGGED:crimedakshina kannadadharmasthalaDharmasthala Burials CaseDharmasthala SITG Parameshwarsit
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Nelamangala Death
Bengaluru City

ಈಜಲು ತೆರಳಿದ್ದ ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

Public TV
By Public TV
6 minutes ago
CRIME
Bengaluru City

ಬೆಂಗಳೂರಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ

Public TV
By Public TV
25 minutes ago
arecanut truck overturn at thirthahalli
Districts

ರಸ್ತೆಯಲ್ಲಿ ಕಾಳಿಂಗ ಅಡ್ಡ ಬಂದಿದ್ದಕ್ಕೆ ಕಕ್ಕಾಬಿಕ್ಕಿಯಾದ ಚಾಲಕ – ಅಡಿಕೆ ಸಾಗಿಸುತ್ತಿದ್ದ ಲಾರಿ ಪಲ್ಟಿ

Public TV
By Public TV
27 minutes ago
lakshmi hebbalkar
Districts

ಮಗಳಿಗೆ ಸುಮ್ಮನಿರು ಎನ್ನಬೇಡಿ, ಮಾತನಾಡು ಎನ್ನಿ: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
33 minutes ago
Nokia
Latest

14 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮುಂದಾದ ನೋಕಿಯಾ

Public TV
By Public TV
58 minutes ago
IPL 2026 RCB Chinnaswamy Stadium
Bengaluru City

ಮೃತ ಅಭಿಮಾನಿಗಳಿಗೆ ಗೌರವ – ಕಪ್ಪು ತೋಳುಪಟ್ಟಿ ಧರಿಸಿ ಕಣಕ್ಕಿಳಿಯಲಿದ್ದಾರೆ ಆರ್‌ಸಿಬಿ ಆಟಗಾರರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?