ಮಂಗಳೂರು: ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ (Dharmasthala Case) ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ (Banglegudde) ರಾಶಿರಾಶಿ ಕಳೇಬರ ಸಿಗುತ್ತವೆ ಎಂಬ ವೀಡಿಯೋ ಹೇಳಿಕೆ ಬೆನ್ನಲ್ಲೇ ಎಸ್‌ಐಟಿ (SIT) ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.
ನೇತ್ರಾವತಿ ನದಿ (Nethravathi River) ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ಎಂಟ್ರಿ ಕೊಟ್ಟಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ: ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್ ದಾಖಲು
ಪಾಯಿಂಟ್ 11ರ ಆಸುಪಾಸಿನಲ್ಲಿ ಭೂಮಿಯ ಮೇಲ್ಭಾಗದಲ್ಲೇ ಮಾನವನ ಮೂಳೆಗಳು ಪತ್ತೆಯಾಗಿವೆ. ಮೂಳೆ ಪತ್ತೆಯಾದ ಸ್ಥಳದಲ್ಲೇ ಬಟ್ಟೆಯ ತುಂಡುಗಳೂ ಪತ್ತೆಯಾಗಿವೆ. ಮೂಳೆಗಳನ್ನು ಪೈಪ್‌ಗಳಲ್ಲಿ ಸಂಗ್ರಹಿಸಿ, ಮಣ್ಣಿನ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಅಟ್ರಾಸಿಟಿ ಕೇಸ್| ಯತ್ನಾಳ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್