ಮಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ (Chinnayya) ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು (SIT Police) ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತು.
ಕೋರ್ಟ್ ಆದೇಶದ ಅನ್ವಯ 15 ದಿನಗಳ ಎಸ್‌ಐಟಿ ಕಸ್ಟಡಿಯಲ್ಲಿದ್ದ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ (Shivamogga Jail) ಕಳುಹಿಸಲು ಪೊಲೀಸರು ಈಗ ಸಿದ್ಧತೆ ನಡೆಸುತ್ತಿದ್ದಾರೆ.
ಭದ್ರತಾ ದೃಷ್ಟಿಯಿಂದ ಆರೋಪಿ ಚಿನ್ನಯ್ಯನನ್ನು ಪೊಲೀಸರು ಮಂಗಳೂರಿನ ಬದಲು ಶಿವಮೊಗ್ಗ ಜೈಲಿಗೆ ಕಳುಹಿಸಲು ಮುಂದಾಗಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.