– 2023ರಲ್ಲೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್‌ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ.
2 ವರ್ಷಗಳ ಹಿಂದೆ 2023ರ ಆಗಸ್ಟ್‌ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಚಿನ್ನಯ್ಯ ಭೇಟಿಯಾಗಿದ್ದ ವಿಡಿಯೋ ಇದ್ದಾಗಿದ್ದು, ಶುಕ್ರವಾರ ರಿಲೀಸ್ ಮಾಡಿದ್ದ ವಿಡಿಯೋದ ಮುಂದುವರಿದ ಭಾಗವಿದು. ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್ ನಂ.17ರ ಬಗ್ಗೆ ಮಾತನಾಡಿದ್ದಾನೆ. ಗೊಮ್ಮಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್‌ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ. ಅದು ಸ್ಮಶಾನ ಅಲ್ಲ, ಬಸ್ ಸ್ಟ್ಯಾಂಡ್‌ನಿಂದ ತರಕಾರಿ ತೆಗೆದುಕೊಂಡು ಹೋಗುವ ಗಾಡಿಯಲ್ಲಿ ಹೆಣ ತಂದು ಹೂತು ಹಾಕುತ್ತಿದ್ದೆ. ಯಾವ ನೆಲ ಒಣಗಿರುತ್ತೋ ಅದನ್ನು ತೆಗೆದು ಹೂತು ಹಾಕುತ್ತಿದ್ದೆ. ಇನ್ನೂ ನೇತ್ರಾವತಿ ತೀರದಲ್ಲಿ ಹೆಣ ಹೂತುಹಾಕಿದ್ದಕ್ಕೆ ಲೆಕ್ಕವೇ ಇಲ್ಲ.ಇದನ್ನೂ ಓದಿ: ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್
ಪ್ರಾಥಮಿಕ ಶಾಲೆಯ ಹಿಂಭಾಗದ ಭಟ್ರ ಮನೆಯ ಬಾವಿಯಲ್ಲಿ ಒಂದು ಹೆಣ ಸಿಕ್ಕಿತ್ತು. ಅಲ್ಲಿ ಏನಾಯ್ತು ಅಂತಾ ಗೊತ್ತಿಲ್ಲ. ನೇತ್ರಾವತಿಯಲ್ಲಿ ಒಂದು ಹೆಣ ತೆಗೆದಿದ್ದೆ. ಅದೇ ದಿನ ಪೊಲೀಸರು ನನಗೆ ಭಟ್ರ ಮನೆಗೆ ಕರೆದುಕೊಂಡು ಹೋದರು. ಅಲ್ಲಿ ಕೇಳಿದ್ರೆ ಹುಡುಗಿ ಫೇಲ್ ಆಗಿದ್ದಕ್ಕೆ ಬಾವಿಗೆ ಹಾರಿದ್ದಳು ಎಂದಿದ್ದರು. ನಾನು ಹೆಣ ಮೇಲೆ ಹಾಕಿ ವಾಪಾಸ್ ಬಂದೆ. ಜೊತೆಗೆ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣವೊಂದನ್ನು ಹೂತು ಹಾಕಿದ್ದೇನೆ ಎಂದಿದ್ದಾನೆ.
ವಿಡಿಯೋದ ಮೊದಲ ಭಾಗದಲ್ಲೇನಿದೆ?
ಗುಂಡಿ ತೆಗೆದು ಹೆಣ ಹೂಳುತ್ತಿದ್ದೆ. ನೇತ್ರಾವತಿ ಸ್ನಾನಘಟ್ಟ ಸರ್ಕಾರಿ ಜಾಗ ಎಂದವರಿಗೆ ರಕ್ತ ಬರೋ ಹಾಗೆ ನನ್ನ ಹತ್ತಿರ ಹೊಡೆಸುತ್ತಿದ್ದರು. ಒಂದು ಹೆಣವನ್ನು ಹೂಳುವಾಗ ಡಾಕ್ಟರ್ ಬರದೇ ಕಾಂಪೌಂಡರ್ ಪೋಸ್ಟ್ ಮಾರ್ಟಮ್ ಮಾಡಿದ್ದ ಎಂದಿದ್ದಾನೆ.
ಸೌಜನ್ಯ ಅತ್ಯಾಚಾರ ಕೊಲೆ ವಿಚಾರ ನಾವು ಬೇರೆ ಕಡೆ ಮಾತನಾಡುತ್ತೇವೆ ಅಂತಾ ನಮ್ಮನ್ನು ಜಾಗ ಖಾಲಿ ಮಾಡಿಸಿದ್ರು. ಅಲ್ಲದೇ ಧರ್ಮಸ್ಥಳದವರು 3.5 ಲಕ್ಷ ರೂ. ಕೊಡಬೇಕಿತ್ತು. 500ರ ನೋಟಿನ 5 ಕಟ್ಟು ತಂದು ಅದರಲ್ಲಿ ಸ್ವಲ್ಪ ಮಾತ್ರ ಕೊಟ್ಟು ಜಾಗ ಖಾಲಿ ಮಾಡಿಸಿದ್ರು. ತುಂಬಾ ಅನ್ಯಾಯ ಮಾಡಿದ್ರು ಅಂತಾ ತಿಮರೋಡಿ ಬಳಿ ಚಿನ್ನಯ್ಯ ಹೇಳಿಕೊಂಡಿದ್ದ.ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ
2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
ಇನ್ನೂ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ನೀಡಲು ಬಂದಿದ್ದ ಚಿನ್ನಯ್ಯನ ಸ್ಫೋಟಕ ಮಾಹಿತಿ ಬಹಿರಂಗ ಆಗಿದೆ. ಚಿನ್ನಯ್ಯ ಧರ್ಮಸ್ಥಳಕ್ಕೆ ತಿಂಗಳ ಹಿಂದಷ್ಟೇ ಬಂದಿಲ್ಲ. ಎರಡು ವರ್ಷದ ಹಿಂದೆಯೇ ಬಂದಿದ್ದ ಎನ್ನಲಾಗಿದೆ. ಇದಕ್ಕೆ ನಿರಂತರವಾಗಿ ಎರಡು ವರ್ಷದಿಂದ ಪ್ಲ್ಯಾನ್ ನಡೆಸಲಾಗಿತ್ತು ಅಂತ ಸ್ಪಷ್ಟವಾದ ಮಾಹಿತಿ ಸಿಕ್ಕಿದೆ. ಚಿನ್ನಯ್ಯ ಎರಡು ವರ್ಷದ ಹಿಂದೆ ಬಂದಿದ್ದಾನೆ ಅನ್ನೋದಕ್ಕೆ ಟೆಕ್ನಿಕಲ್ ಎವಿಡೆನ್ಸ್ ಜೊತೆಗೆ ಚಿನ್ನಯ್ಯ ತಪ್ಪೊಪ್ಪಿಗೆಯೂ ಸಹ ಪ್ರಕರಣಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ.
ಅದೇ ಗ್ಯಾಂಗ್ ಜೊತೆಯಲ್ಲಿಯೇ ವಾಸವಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗ ಆಗಿದೆ. ಇತ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಿಕ್ಕ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಮಹೇಶ್ ಶೆಟ್ಟಿ ಮನೆಯಲ್ಲಿ ಇಲ್ಲದ ಕಾರಣ ಉಜಿರೆಯ ಮನೆ ಗೋಡೆಗೆ ನೋಟಿಸ್ ಅಂಟಿಸಿ, ಸೆಪ್ಟೆಂಬರ್ 21ಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಲೈಸೆನ್ಸ್ ಹೊಂದಿದ್ದಾರೆಯೇ ಇಲ್ಲವೇ ಎಂಬುದನ್ನು ಬೆಳ್ತಂಗಡಿ ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ. ಲೈಸೆನ್ಸ್ ಇಲ್ಲ ಎಂಬುದು ಖಾತ್ರಿಯಾದ್ರೆ ತಿಮರೋಡಿ ಬಂಧಿಸುವ ಸಾಧ್ಯತೆ ಇದೆ. ಈ ಮಧ್ಯೆ ಎಸ್‌ಐಟಿ ಬುಲಾವ್ ಮೇರೆಗೆ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ವಕೀಲ ಕೇಶವ ಗೌಡ ಬೆಳಾಲು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರ ಹಾಗೂ ಬುರುಡೆ ಕೇಸ್ ಬಗ್ಗೆ ಈ ಇಬ್ಬರು ಹಲವು ಹೇಳಿಕೆ ಕೊಟ್ಟಿದ್ದರು. ಹೀಗಾಗಿ ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್, ವಾಕಿಂಗ್ ಸ್ಟಿಕ್ ಪತ್ತೆ