– ಬುರುಡೆ ಪ್ರಕರಣ ದಿಕ್ಕು ತಪ್ಪಿಸುವ ಹುನ್ನಾರ, ಯಾವ್ದೇ ತನಿಖೆಗೆ ಸಿದ್ಧ: ಉದಯ್ ಕುಮಾರ್ ಜೈನ್
– ಸೌಜನ್ಯ ಮನೆ ಮೇಲೆ ಇಡಿ ರೇಡ್ ಆಗಲಿ ಅಂತ ಒತ್ತಾಯ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Dharmasthala Case) ಈಗ ಬಹುದೊಡ್ಡ ತಿರುವು ಸಿಕ್ಕಿದೆ. ಸೌಜನ್ಯ ಪ್ರಕರಣದ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿತಾ ಅನ್ನೋ ಕುತೂಹಲ ಶುರುವಾಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ (Soujanya Case) ಆರೋಪ ಹೊತ್ತು ಕ್ಲೀನ್‌ಚಿಟ್ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್ ನೀಡಿರುವುದು ಇದಕ್ಕೆ ಕಾರಣವಾಗಿದೆ.
ಕರ್ನಾಟಕ ಪೊಲೀಸ್, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್‌ಚಿಟ್ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್ ನೀಡಿದೆ. ಹೀಗಾಗಿ ಆರೋಪ ಹೊತ್ತ ಉದಯ್ ಕುಮಾರ್ ಜೈನ್ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶಿ ಫಂಡಿಂಗ್ – ತನಿಖೆಗೆ ಇಡಿ ಎಂಟ್ರಿ
ಎಸ್‌ಐಟಿ ಕಚೇರಿಗೆ ಭೇಟಿ ನೀಡುವ ಮುನ್ನ ʻಪಬ್ಲಿಕ್ ಟಿವಿʼ ಜೊತೆಗೆ ಉದಯ್ ಕುಮಾರ್ ಜೈನ್ ಮಾತನಾಡಿದ್ದಾರೆ. ಸೌಜನ್ಯ ತಾಯಿ ಎಸ್‌ಐಟಿಗೆ ಕೊಟ್ಟ ದೂರಿನ ಮೇರೆಗೆ ಅಥವಾ ಚಿನ್ನಯ್ಯ ನೀಡಿದ ಕೇಳಿಕೆಯ ಕಾರಣದಿಂದಲೂ ನನ್ನನ್ನ ಎಸ್‌ಐಟಿ ಕರೆದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ಭೂಸಮಾಧಿ – 1,000 ಜನ ಬಲಿ; ಬದುಕುಳಿದಿದ್ದು ಒಬ್ಬ ಮಾತ್ರ
ಮುಂದುವರಿದು.. ಇದು ಬುರುಡೆ ಪ್ರಕರಣದ ದಿಕ್ಕು ತಪ್ಪಿಸುವ ಹುನ್ನಾರ. ಒಂದು ವಿಡಿಯೋನಲ್ಲಿ ಸೌಜನ್ಯ ಕೊಲೆಯಾದ ಸಂದರ್ಭದಲ್ಲಿ ನಾನು ಇರಲಿಲ್ಲ ಅಂತ ಒಂದು ವಿಡಿಯೋನಲ್ಲಿ ಹೇಳಿದ್ದಾನೆ. ಮತ್ತೊಂದು ವಿಡಿಯೋನಲ್ಲಿ ನಾನೇ ಆಕೆಯನ್ನ ಹೊತ್ಕೊಂಡು ಹೋಗೋದು ನೋಡಿದ್ದೇನೆ ಅಂತ ಹೇಳಿದ್ದಾನೆ. ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿದ್ದಾನೆ. ಈಗ ಸೌಜನ್ಯ ಪ್ರಕರಣದಲ್ಲಿ ನನ್ನ ಬಗ್ಗೆ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಗುಂಡಿ ಎಲ್ಲಾ ತೋಡಿಯಾಗಿದೆ, ಈಗ ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣವನ್ನ ಮತ್ತೆ ಮುನ್ನಲೆಗೆ ತರುತ್ತಿದ್ದಾರೆ. ಸಿಐಡಿ, ಸಿಬಿಐ ನನ್ನನೂ ತನಿಖೆ ನಡೆಸಿದ್ದಾರೆ. ಬ್ರೈನ್ ಮ್ಯಾಪಿಂಗ್ ಕೂಡ ಮಾಡಿದ್ದಾರೆ, ಇವತ್ತು ಮತ್ತೆ ಎಸ್‌ಐಟಿ ಕರೆದಿದ್ದಾರೆ. ನಾವು ಯಾವುದೇ ವಿಚಾರಣೆಗೂ ಸಿದ್ಧ ಎಂದು ಉದಯ್ ಕುಮಾರ್ ಜೈನ್ ಹೇಳಿದ್ದಾರೆ. ಇದನ್ನೂ ಓದಿ: ಕಾನ್‌ಸ್ಟೆಬಲ್, ಸಹೋದರ ಸೇರಿ 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ಅತ್ಯಾಚಾರ ಆರೋಪ
ಸೌಜನ್ಯ ಮನೆ ಮೇಲೆ ಇಡಿ ದಾಳಿಯಾಗಲಿ
ಸೌಜನ್ಯ ಸತ್ತು ಒಂದು ವರ್ಷದ ನಂತರ ನಮ್ಮ ಹೆಸರು ಸೇರಿಸುವ ಕುತಂತ್ರ ನಡೆಯಿತು. ಆದ್ರೆ ಲೋಕಲ್ ಪೊಲೀಸ್ ತನಿಖೆ ವೇಳೆ ಎಫ್‌ಐಆರ್‌ನಲ್ಲಿ ನನ್ನ ಹೆಸರೇ ಇರಲಿಲ್ಲ. ಗೌರ್ಮೆಂಟ್ ವಕೀಲನನ್ನ ಕ್ಯಾಚ್ ಮಾಡಿ ಕುತಂತ್ರ ನಡೆಸಿದ್ರು. ಈಗ ನಮ್ಮನ್ನೆಲ್ಲಾ ದಿಕ್ಕಾಪಾಲು ಮಾಡಿ ಸೌಜ್ಯ ತಾಯಿ ದೊಡ್ಡ ಮನೆಯಲ್ಲಿ ಆರಾಮಾಗಿದ್ದಾರೆ. ಅವರ ಮನೆ ಮೇಲೂ ಇಡಿ ರೇಡ್ ಆಗಬೇಕು ಅಂತ ಒತ್ತಾಯಿಸಿದ್ದಾರೆ.