ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ (Dharmasthala Deaths Probe) ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಚಿನ್ನಯ್ಯನಿಗೆ (Chinnaiah) ಜಾಮೀನು ಸಿಕ್ಕಿದೆ.
ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ (Bail) ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಧರ್ಮಸ್ಥಳ ತಲೆಬುರುಡೆ ಕೇಸ್; ಬೆಳ್ತಂಗಡಿ ಕೋರ್ಟ್‌ಗೆ 3,923 ಪುಟಗಳ ತನಿಖಾ ವರದಿ ಸಲ್ಲಿಕೆ
1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
