ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ (Dr.D Veerendra Heggade) ಯವರು ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು.
ಇಂದು ದೇವೇಗೌಡರ ಪದ್ಮನಾಭನಗರ ನಿವಾಸಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಉಪಾಧ್ಯಕ್ಷ ಡಾ. ಸುರೇಂದ್ರ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ವೀರೇಂದ್ರ ಹೆಗ್ಗಡೆಯವರು ದೇವೇಗೌಡ (H.D Devegowda) ರ ಯೋಗಕ್ಷೇಮ ವಿಚಾರಿಸಿ ಶುಭ ಹಾರೈಸಿದರು. ಇದನ್ನೂ ಓದಿ: ಹೆಚ್.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್
ಈ ಹಿಂದೆ ನಿರ್ಮಲಾ ಸೀತಾರಾಮನ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಿತರರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಬಳಿಕ ಮಾಧ್ಯಮ ಬಿಡುಗಡೆ ಮಾಡಿದ್ದ ಹೆಚ್‍ಡಿಡಿ, ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದರು.
ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದರು. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಕಾರ್ಯಕರ್ತರು ಆತಂಕ ಪಡೋ ಅಗತ್ಯವಿಲ್ಲ: ಹೆಚ್.ಡಿ ದೇವೇಗೌಡ