ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ಉತ್ಕನನದ ವೇಳೆ ಎರಡು ಕಾರ್ಡ್ (Card) ಮತ್ತು ಹರಿದ ರವಿಕೆ (Torn Red Blouse) ಪತ್ತೆಯಾಗಿವೆ.
ಸ್ಥಳದಲ್ಲಿ ಒಂದು ಪಾನ್ ಕಾರ್ಡ್ ಮತ್ತೊಂದು ಡೆಬಿಡ್ ಕಾರ್ಡ್ ಪತ್ತೆಯಾಗಿದೆ. ಸ್ಥಳ ಅಗೆಯುವ ಸಂದರ್ಭ ದೊರೆತ ಎರಡು ಐಡಿ ಕಾರ್ಡ್ ಸಿಕ್ಕಿದೆ ಎಂದು ದೂರುದಾರನ ಪರ ವಕೀಲ ಮಂಜುನಾಥ್ ಎನ್ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಎಸ್‌ಐಟಿ ಮೂಲಗಳನ್ನು ಆಧಾರಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಹೇಳಿಕೆಯಲ್ಲಿ ಏನಿದೆ?
ಸೈಟ್ ಸಂಖ್ಯೆ 1 ರಲ್ಲಿ ಸುಮಾರು 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಒಂದು ಕಾರ್ಡ್‌ನಲ್ಲಿ ಪುರುಷನ ಹೆಸರು ಇದ್ದರೆ ಇನ್ನೊಂದು ಕಾರ್ಡ್‌ನಲ್ಲಿ ಲಕ್ಷ್ಮಿ ಎಂಬ ಮಹಿಳೆಯ ಹೆಸರು ಇದೆ.
ಸಾಕ್ಷ್ಯಗಳು ಸಿಕ್ಕಿದ ಕಾರಣ ನಮಗೆ ಹೊಸ ಭರವಸೆ ಮೂಡಿದೆ. ನಾವು ಎಸ್‌ಐಟಿ ಅವರ ಕೆಲಸದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದ್ದೇವೆ. ವಿಶೇಷ ತನಿಖಾ ತಂಡ ಶ್ಲಾಘನೀಯ ಕೆಲಸ ಮಾಡುತ್ತಿದೆ.