ಚಾಮರಾಜನಗರ: ಧರ್ಮಸ್ಥಳ ಪ್ರಕರಣದ (Dharmasthala Mass Burials) ಬಗ್ಗೆ ನಾಳೆ (ಸೋಮವಾರ) ಸದನದಲ್ಲಿ ಸಂಪೂರ್ಣ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwar) ತಿಳಿಸಿದ್ದಾರೆ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳ ಚಲೋ ನಡೆಸಿರುವ ಬಗ್ಗೆ ಗುಂಡ್ಲುಪೇಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ಯಾರೂ ಸಹ ರಾಜಕಾರಣ ಮಾಡಬಾರದು. ಧರ್ಮಸ್ಥಳ ಪ್ರಕರಣ ನ್ಯಾಯಕ್ಕೆ ಹಾಗೂ ಕಾನೂನಿಗೆ ಸಂಬಂಧಿಸಿದ ವಿಚಾರವಾಗಿದೆ. ಯಾವುದೇ ವ್ಯಕ್ತಿ ಕಂಪ್ಲೆಂಟ್ ಕೊಟ್ಟರೆ ಪೋಲಿಸರು ಎಫ್‌ಐಆರ್ ಹಾಕಿ ತನಿಖೆ ಮಾಡುತ್ತಾರೆ. ತಪ್ಪು ಕಂಡು ಬಂದರೆ ಮಾತ್ರ ಕೇಸ್ ಮುಂದುವರಿಸುತ್ತಾರೆ ಎಂದರು. ಇದನ್ನೂ ಓದಿ: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ – ಸೋಮವಾರ ಶಾಲೆಗಳಿಗೆ ರಜೆ ಘೋಷಣೆ
ಇದು ಅಷ್ಟಕ್ಕೇ ಸೀಮಿತವಾಗಬೇಕೆ ವಿನಃ ರಾಜಕೀಯ ಮಾಡಬಾರದು. ಇದರಲ್ಲಿ ಧಾರ್ಮಿಕ ವಿಚಾರ ಎಳೆದು ತರೋದು ಸರಿಯಲ್ಲ. ಎಸ್‌ಐಟಿ ತನಿಖೆ ಪೂರ್ಣಗೊಳ್ಳಲು ಬಿಡಬೇಕು, ಸತ್ಯಾಸತ್ಯತೆ ಗೊತ್ತಾಗುತ್ತೆ. ಮಧ್ಯಂತರ ವರದಿ ಕೊಡಬೇಕಾ, ಅಂತಿಮ ವರದಿ ಕೊಡಬೇಕಾ ಎಂಬುದು ಎಸ್‌ಐಟಿಗೆ ಬಿಟ್ಟ ವಿಚಾರ. ಸರ್ಕಾರ ಅವರಿಗೆ ಯಾವುದೇ ನಿರ್ದೇಶನ ಕೊಡಲ್ಲ. ಎಸ್‌ಐಟಿ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಮತದಾರರ ಹಕ್ಕುಗಳ ಯಾತ್ರೆಗೆ ಚಾಲನೆ – ಬಿಜೆಪಿ, ಚು. ಆಯೋಗ ವಿರುದ್ಧ ರಾಗಾ ವಾಗ್ದಾಳಿ
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆದಿದೆ ಎಂಬ ಡಿಸಿಎಂ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ಅಭಿಪ್ರಾಯ ಹೇಳಿದ್ದಾರೆ. ಆದರೆ ಇದು ರಾಜಕೀಯ ಆಗಬಾರದು. ಯಾರೂ ಕೂಡ ರಾಜಕೀಯ ಮಾಡಬಾರದು. ಮತ್ತೆ ಶವಗಳಿಗೆ ಶೋಧಕಾರ್ಯ ನಡೆಸುವ ಬಗ್ಗೆ ಎಸ್‌ಐಟಿ ತೀರ್ಮಾನ ಮಾಡುತ್ತದೆ. ಎಲ್ಲೋ ಒಂದು ಕಡೆ ಅಂತ್ಯ ಆಗುತ್ತೆ ಎನ್ನುವ ಮೂಲಕ ಶವಗಳ ಶೋಧ ಕಾರ್ಯಕ್ಕೆ ಫುಲ್‌ಸ್ಟಾಪ್ ಇಡುವ ಸುಳಿವು ನೀಡಿದರು. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಪತ್ರದ ಮೂಲಕ ಪ್ರಧಾನಿ ಮೋದಿ ಸಂತಾಪ