ಮಂಗಳೂರು: ಧರ್ಮಸ್ಥಳ (Dharmasthala) ಸಂಘರ್ಷದ ಬೆನ್ನಲ್ಲೇ ಸಾಕ್ಷಿದಾರನಾಗಿ ಬಂದಿರುವ ದೂರುದಾರ ಈಗ ಗನ್‌ಮ್ಯಾನ್ ಭದ್ರತೆಯನ್ನು (Gunman Security) ಕೇಳಿರುವ ವಿಚಾರ ಬೆಳಕಿಗೆ ಬಂದಿದೆ.
ಹೌದು, ಬುಧವಾರ ಸಂಜೆ ಧರ್ಮಸ್ಥಳದಲ್ಲಿ ನಡೆದ ಘರ್ಷಣೆಯ ಬಳಿಕ ದೂರುದಾರನಿಂದ ಈ ವಿಶೇಷ ಮನವಿ ಬಂದಿದೆ. ನನ್ನ ಮೇಲೂ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಗನ್‌ಮ್ಯಾನ್ ನೀಡಬೇಕೆಂದು ಮನವಿ ಮಾಡಿದ್ದಾನೆ.
ಗುರುವಾರದ ವಿಚಾರಣೆಯ ಸಂದರ್ಭದಲ್ಲಿ ದೂರುದಾರನ ಪರ ವಕೀಲರು ವಿಶೇಷ ತನಿಖಾ ತಂಡಕ್ಕೆ (SIT) ಗನ್‌ಮ್ಯಾನ್ ನೀಡಬೇಕೆಂದು ಲಿಖಿತ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅನಾಮಿಕ ಉಜಿರೆಯ ವ್ಯಕ್ತಿಯ ಮನೆಯಲ್ಲಿ ಉಳಿಯುತ್ತಿದ್ದಾನೆ, ನಿಮ್ಮ ವಶಕ್ಕೆ ಪಡೆಯಿರಿ: SITಗೆ ಮನವಿ
ಶೋಧ ಮುಕ್ತಾಯದ ನಂತರವೂ ನನಗೆ ಗನ್ ಮ್ಯಾನ್ ಭದ್ರತೆ ನೀಡಬೇಕೆಂದು ಎಸ್‌ಐಟಿ ಎಸ್‌ಪಿ ಜಿತೇಂದ್ರ ದಯಾಮ್ ಮುಂದೆ ಒತ್ತಾಯ ಮಾಡಿದ್ದಾನೆ. ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲು
ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದೂರುದಾರ ಆಗಮಿಸಿದ್ದಾನೆ. ದೂರುದಾರ ಆಗಮಿಸಿದ ಖಾಸಗಿ ಕಾರಿನ ಮುಂದೆ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಪೊಲೀಸ್ ವಾಹನದಲ್ಲಿದ್ದ ಚಾಲಕ ಸಹಿತ ಇಬ್ಬರು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.