ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ತನಿಖೆ ವಿಚಾರದಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆಯನ್ನು ಇಟ್ಟಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಗೃಹ ಸಚಿವ ಪರಮೇಶ್ವರ್ (Parameshwar) ತನಿಖಾ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.
ಹೌದು. ಅನಾಮಿಕ ವ್ಯಕ್ತಿಯ ಪ್ರವೇಶ ಆಗುತ್ತಿದ್ದಂತೆ ಎಸ್‌ಐಟಿ ರಚನೆಯಾಗಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಜನರ ಮನವಿಗೆ ಸ್ಪಂದಿಸಿ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು ಈಗ ಧರ್ಮಸ್ಥಳದ ಅರಣ್ಯದಲ್ಲಿ ಉತ್ಕನನದ ಕೆಲಸ ನಡೆಯುತ್ತಿದೆ. ಇದನ್ನೂ ಓದಿ: ಧರ್ಮಸ್ಥಳ ಉತ್ಕನನ: 2 ಕಾರ್ಡ್, ಹರಿದ ರವಿಕೆ ಪತ್ತೆ
ಎಸ್‌ಐಟಿ ತನಿಖೆ ನಡೆಸುತ್ತಿರುವ ಈ ಸಂದರ್ಭದಲ್ಲಿ ತಕ್ಷಣಕ್ಕೆ ಯಾವುದೇ ಮಧ್ಯಂತರ ವರದಿಯನ್ನು ಪಡೆಯದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಆದರೆ ಮೌಖಿಕವಾಗಿ ತನಿಖಾ ಪ್ರಗತಿ ಮಾಹಿತಿಯನ್ನು ಪಡೆಯಲು ಮುಂದಾಗಿದೆ.
ಹೈಕಮಾಂಡ್‌ಗೂ ಸಿಎಂ ಸಿದ್ದರಾಮಯ್ಯ ಮೌಖಿಕ ಮಾಹಿತಿ ನೀಡುವ ಸಾಧ್ಯತೆಯಿದೆ. ಆಗಸ್ಟ್ 5 ರಂದು ಬೆಂಗಳೂರಿಗೆ ರಾಹುಲ್ ಗಾಂಧಿ (Rahul Gandhi) ಆಗಮಿಸಲಿದ್ದಾರೆ. ರಾಹುಲ್ ಆಗಮನಕ್ಕೂ ಮುನ್ನ ಪ್ರಕರಣದ ಬಗ್ಗೆ ಹೈಕಮಾಂಡ್‌ಗೆ ಸಿಎಂ ಮಾಹಿತಿ ನೀಡಲಿದ್ದಾರೆ.