ಮಂಗಳೂರು: ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala Temple) ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ (Belthangady Court) ವಕಾಲತ್ತು ಸಲ್ಲಿಕೆಯಾಗಿದೆ.
ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ ನಾಗೇಶ್(CV Nagesh) ಹಾಗೂ ಪುತ್ತೂರಿನ ವಕೀಲ ಮಹೇಶ್ ಕಜೆ (Mahesh Kaje) ಇಂದು ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿ ವಕಾಲತ್ತು ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಬುರುಡೆ ನೋಡಿ ಕೆಟ್ಟ ಕನಸು, ಭಯಗೊಂಡು ಕಿರುಚಾಡಿದ್ದೆ – ದೆಹಲಿಯಿಂದ ತರಲ್ಲ ಎಂದಿದ್ದೆ: ಜಯಂತ್ ಟಿ
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ವಿಶೇಷ ತನಿಖಾ ತಂಡ (SIT) ತನಿಖೆ ನಡೆಸುತ್ತಿದ್ದು ಈಗಾಗಲೇ ಬೆಳ್ತಂಗಡಿ ಕೋರ್ಟ್ ವರದಿ ಸಲ್ಲಿಸಿದೆ. ಈ ವರದಿ ಸಂಬಂಧಿಸಿ ಜ.3ರಂದು ಬೆಳ್ತಂಗಡಿ ಕೋರ್ಟ್ ಆದೇಶ ಮಾಡಲಿದೆ.
ಸದ್ಯ ವರದಿಯಲ್ಲಿ ಧರ್ಮಸ್ಥಳ ವಿರುದ್ದ ಷಡ್ಯಂತ್ರ ನಡೆಸಿರುವುದು ಬಹಿರಂಗೊಂಡಿದ್ದರೂ ಷಡ್ಯಂತ್ರ ನಡೆಸಿದವರ ವಿರುದ್ದ ಎಸ್ಐಟಿ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಕ್ಷೇತ್ರದ ಪರ ವಕೀಲರು ವಕಾಲತ್ತು ಸಲ್ಲಿಸಿದ್ದಾರೆ.

