ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಸಮಾಧಿ ಶೋಧವನ್ನು (Dharmasthala Mass Burials) ಎಸ್‌ಐಟಿ (SIT) ಅಧಿಕಾರಿಗಳು ಸ್ಥಗಿತ ಮಾಡಿದ್ದಾರೆ. ಇಂದು ಎಸ್‌ಐಟಿ ಪೊಲೀಸರು ಸುಮಾರು 6 ಗಂಟೆಗಳ ಕಾಲ ಅನಾಮಿಕ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ನಿರಂತರವಾಗಿ ಎಸ್‌ಐಟಿ ಪೊಲೀಸರು ವಿವಿಧ ಆಯಾಮಗಳಲ್ಲಿ ಅನಾಮಿಕನ ಮುಂದೆ ಪ್ರಶ್ನೆಗಳನ್ನ ಇಟ್ಟಿದ್ದಾರೆ. ಅನಾಮಿಕ ದೂರುದಾರನ ಮುಂದೆ ವೀಡಿಯೋ ಪ್ರದರ್ಶನ ಮಾಡಿ ತನಿಖೆ ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಆ.23 ಕ್ಕೆ ವಿಚಾರಣೆ ಮುಂದೂಡಿಕೆ
ಕೋರ್ಟ್‌ಗೆ ಪ್ರೊಡ್ಯೂಸ್ ಮಾಡಿದ ತಲೆಬುರುಡೆ ತಂದದ್ದೆಲ್ಲಿದ? ಬುರುಡೆ ತಂದಾಗ ಸ್ಥಳದಲ್ಲಿ ಇದ್ದವರು ಯಾರು? ಕತ್ತಿಯಲ್ಲಿ ಬುರುಡೆ ಎತ್ತಿದವರು ಯಾರು? ಸಮಾಧಿಯೊಳಗಿಂದ ನೀನು ಬುರುಡೆ ಅಗೆದು ತಂದಿರುವೆಯಾ? ಕಾಡಿನೊಳಗಿಂದ ಬುರುಡೆ ಎತ್ತಿದ ವೀಡಿಯೋದಲ್ಲಿ ಇರುವವರು ಯಾರು? ಕಾಡಿನ ಒಳಗೆ ಬುರುಡೆ ಸಿಕ್ಕಿದ್ದರೆ ಅದು ಅಸಹಜ ಸಾವಿನ ಪ್ರಕರಣವೋ? ಸಮಾಧಿಯಿಂದ ಬುರುಡೆ ಆಗಿದ್ದು ತಂದದ್ದು ಹೌದಾ? ಅನಾಮಿಕನ ಜೊತೆ ಕೈ ಜೋಡಿಸಿದವರು ಯಾರು ಎಂಬೆಲ್ಲಾ ಪ್ರಶ್ನೆಗಳನ್ನು ತನಿಖಾಧಿಕಾರಿ ಜಿತೇಂದ್ರ ದಯಾಮಾ ಅನಾಮಿಕನಿಗೆ ಕೇಳಿದ್ದಾರೆ. ಇದನ್ನೂ ಓದಿ: ದಾವಣಗೆರೆ| ಬೀದಿ ನಾಯಿ ದಾಳಿಯಿಂದ ರೇಬಿಸ್; 4 ತಿಂಗಳಿಂದ ಆಸ್ಪತ್ರೆಯಲ್ಲಿದ್ದ ಬಾಲಕಿ ಸಾವು
ಈ ಎಲ್ಲಾ ಪ್ರಶ್ನೆಗಳಿಗೆ ಎಸ್‌ಐಟಿ ಪೊಲೀಸರ ನಿರೀಕ್ಷೆಯಂತೆ ಯಾವುದೇ ಉತ್ತರಗಳು ಅನಾಮಿಕನಿಂದ ಬಂದಿಲ್ಲ. ಬದಲಾಗಿ ಕೋರ್ಟ್‌ಗೆ ಪ್ರೊಡ್ಯೂಸ್ ಮಾಡಿದ ಬುರುಡೆ ಯಾವ ಭಾಗದಿಂದ ತೆಗೆದು ತಂದದ್ದು ಎಂಬ ಪ್ರಶ್ನೆಗೂ ಸರಿಯಾದ ಉತ್ತರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಬಂಗ್ಲೆ ಗುಡ್ಡೆ, ಕಲ್ಲೇರಿ, ರತ್ನಗಿರಿ, ಬೊಳಿಯಾರು ಎಂಬ ಉತ್ತರವನ್ನು ಹೇಳಿದ್ದಾನೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ: ಪರಮೇಶ್ವರ್ ಘೋಷಣೆ
ಎಸ್‌ಐಟಿ ಪೊಲೀಸರು ಆರಂಭದಲ್ಲಿ ಮಾಡಬೇಕಾಗಿದ್ದ ತನಿಖೆಯನ್ನು ಈಗ ಶುರು ಮಾಡಿದ್ದಾರೆ. ಕಾಡು ಮೇಡು ಅಲೆಸಿ ಗುಂಡಿ ತೋಡಿಸಿ ಈಗ ಹೊಸ ಕಥೆ ಶುರು ಮಾಡಿದ ಅನಾಮಿಕನ ತನಿಖೆ ಇನ್ನೆತ್ತ ಸಾಗುತ್ತದೆ ಎಂಬ ಕುತೂಹಲ ಎಲ್ಲರಲ್ಲಿ ಮನೆಮಾಡಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ಅನಾಮಿಕನ ಮಂಪರು ಪರೀಕ್ಷೆ ಮಾಡಿ: ಕಿಶೋರ್ ಕುಮಾರ್ ಪುತ್ತೂರು

