ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ (Soujanya Rape and Murder case) ವಿಚಾರಣೆ ಎದುರಿಸಿದ್ದ ಉದಯ್ ಕುಮಾರ್ ಜೈನ್ (Uday Kumar Jain) ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.
ಸೌಜನ್ಯ ಪ್ರಕರಣದಲ್ಲಿ ನನ್ನ ಹೆಸರನ್ನ ಉದ್ದೇಶಪೂರ್ವಕವಾಗಿ ಸೇರಿಸಲಾಗಿದೆ. 13 ವರ್ಷಗಳಿಂದ ನನ್ನ ಹೆಸರನ್ನು ಪ್ರಕರಣದಲ್ಲಿ ಸುಖಾಸುಮ್ಮನೆ ಸೇರಿಸಿದ್ದು ಸಮಾಜದಲ್ಲಿ ನನ್ನನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್| ಎಸ್‌ಐಟಿ ಕಸ್ಟಡಿ ಅಂತ್ಯ – ಶಿವಮೊಗ್ಗ ಜೈಲಿಗೆ ಚಿನ್ನಯ್ಯ
ಸಂತೋಷ್ ರಾವ್ ಆರೋಪಿ ಎಂದು ಬೆಳ್ತಂಗಡಿ ಪೊಲೀಸರು ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದರು. ಸಿಐಡಿ, ಸಿಬಿಐ ತನಿಖೆಯಲ್ಲಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿಲ್ಲ. ನಾನು ನಿರ್ದೋಷಿ ಎಂದು ಸಾಬೀತುಪಡಿಸಲು ಮಂಪರು ಪರೀಕ್ಷೆ ಕೂಡ ಮಾಡಿಸಿದ್ದೇನೆ. ಹೀಗಾಗಿ ನನಗೆ ನ್ಯಾಯ ಕೊಡಬೇಕು ಅಥವಾ ದಯಾಮರಣ ನೀಡಬೇಕೆಂದು ಉದಯ್ ಜೈನ್ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಕೇರಳ ಕಮ್ಯುನಿಸ್ಟ್ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್
ಸಿಐಡಿ, ಸಿಬಿಐ ತನಿಖೆಯಲ್ಲಿ ಕಳಂಕಮುಕ್ತರಾಗಿದ್ದ ಉದಯ್ ಕುಮಾರ್ ಜೈನ್ ಅವರಿಗೆ ವಿಶೇಷ ತನಿಖಾ ತಂಡ ನೋಟಿಸ್ ನೀಡಿ ವಿಚಾರಣೆ ನಡೆಸಿತ್ತು. ನೋಟಿಸ್ ಹಿನ್ನೆಲೆಯಲ್ಲಿ ಉದಯ್ ಜೈನ್ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದರು.