ಮಂಗಳೂರು: ಧರ್ಮಸ್ಥಳದ ಸೌಜನ್ಯ (Dharmasthala Sowjanya Case) ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಹೆತ್ತವರು ಆರೋಪಿಸಿದ್ದ ಧರ್ಮಸ್ಥಳದ ಧೀರಜ್ ಕೆಲ್ಲ, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದಾರೆ.
Advertisement
ಮಂಗಳೂರಿನ ಸುದ್ದಿಗೋಷ್ಠಿಯಲ್ಲಿ ಧೀರಜ್ ಕೆಲ್ಲಾ ಮಾತನಾಡಿ, ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಮತ್ತು ಇತರರು ನಮ್ಮ ವಿರುದ್ಧ ಆರೋಪ ಮಾಡಿದ್ದರು. ದುಡ್ಡು ಮಾಡುವ ಏಕೈಕ ಉದ್ದೇಶದಿಂದ ತಿಮರೋಡಿ ಆರೋಪ ಮಾಡಿದ್ದರು. ನಾವು ತನಿಖೆಗೆ ಹಾಜರಾದರೂ ಸುಖಾಸುಮ್ಮನೆ ಆರೋಪ ಮಾಡಲಾಗಿತ್ತು. ಹೀಗಾಗಿ ನಾವು ಕಾನತ್ತೂರು ದೈವದ ಮೊರೆ ಹೋಗಿ ಆಣೆಗೆ ಕರೆದಿದ್ದೆವು, ಆದರೆ ಅದನ್ನು ತಪ್ಪಿಸಿದ್ದರು ಎಂದರು.
Advertisement
Advertisement
2014 ರ ಜುಲೈ ಹಾಗೂ ಆಗಸ್ಟ್ ನಲ್ಲಿ ಸಿಬಿಐ (CBI) ನಮ್ಮನ್ನು ಎರಡೆರೆಡು ಬಾರಿ ಬೆಳ್ತಂಗಡಿಯಲ್ಲಿ ತನಿಖೆ ಮಾಡಿತ್ತು. ಚೆನ್ನೈ, ಬೆಂಗಳೂರಿಗೂ ಕರೆಸಿ ನಮ್ಮನ್ನು ತನಿಖೆ ಮಾಡಿದ್ದಾರೆ. ನಮ್ಮ ರಕ್ತದ ಪರೀಕ್ಷೆ, ಡಿಎನ್‍ಎ ಪರೀಕ್ಷೆ, ಮಂಪರು ಪರೀಕ್ಷೆ (ಬ್ರೈನ್ ಮ್ಯಾಪಿಂಗ್) ಕೂಡ ಸಿಬಿಐ ಮಾಡಿದೆ. ಮೊಬೈಲ್ ಲೊಕೇಶನ್ ಟ್ರೇಸ್, ಸುಳ್ಳು ಪತ್ತೆಯ ಪಾಲಿಗ್ರಾಫ್ ಟೆಸ್ಟ್ ಜೊತೆ ಅನೇಕ ವೈಜ್ಞಾನಿಕ ಪರೀಕ್ಷೆ ಮಾಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸೌಜನ್ಯ ರೇಪ್, ಮರ್ಡರ್ ಕೇಸ್- ಆರೋಪಿ ಸಂತೋಷ್ ರಾವ್ ಖುಲಾಸೆ
Advertisement
2015ರ ಫೆ.23 ರಂದು ನಮ್ಮ ಮನವಿ ಮೇರೆಗೆ ಸಿಬಿಐ ಬೆಂಗಳೂರಿನ ಕೋರ್ಟ್ ಗೆ ಬ್ರೈನ್ ಮ್ಯಾಪಿಂಗ್ ಗೆ ಅರ್ಜಿ ಹಾಕಿತ್ತು. ಕೋರ್ಟ್ ಅನೇಕ ಬಾರಿ ಇದರ ಅಡ್ಡ ಪರಿಣಾಮಗಳ ಬಗ್ಗೆ ಹೇಳಿತ್ತು. ಆದರೆ ನಮ್ಮ ಮನವಿ ಮೇರೆಗೆ ಕೋರ್ಟ್ ಮಂಪರು ಪರೀಕ್ಷೆ ಮತ್ತು ಬ್ರೈನ್ ಮ್ಯಾಪಿಂಗ್ ಗೆ ಅನುಮತಿ ನೀಡಿತ್ತು. ಕೊನೆಗೆ ಎಲ್ಲಾ ತನಿಖೆ ಬಳಿಕ ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ಆ ಆರೋಪ ಪಟ್ಟಿಯಲ್ಲಿ ಎಲ್ಲೂ ನಮ್ಮನ್ನ ಅಪರಾಧಿ ಮಾಡಿಲ್ಲ. ಆದರೆ ಮತ್ತೆ ಸೌಜನ್ಯ ತಂದೆ ನಮ್ಮನ್ನು ಆರೋಪಿಯನ್ನಾಗಿ ಮಾಡಲು ಅರ್ಜಿ ಹಾಕಿದ್ರು. ಆದರೆ ನಮ್ಮ ಅನುಪಸ್ಥಿತಿಯಲ್ಲಿ ಕೋರ್ಟ್ ನಮಗೆ ಸಮನ್ಸ್ ನೀಡಿತು. ಹೀಗಾಗಿ ನಾವು ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದಾಗ ನ್ಯಾಯಾಲಯ ಸಿಬಿಐ ಆರೋಪ ಪಟ್ಟಿ ಉಲ್ಲೇಖಿಸಿತು ಎಂದು ಹೇಳಿದರು.
ನಮ್ಮ ವಿರುದ್ಧ ಯಾವುದೇ ಸಾಕ್ಷ್ಯ, ಆರೋಪ ಇಲ್ಲದ ಕಾರಣ ಆರೋಪಿತರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್, ಆಕೆಯ ತಂದೆಯ ಮನವಿ ರದ್ದು ಮಾಡಿತು. ಇದೀಗ ಇಡೀ ಕೇಸ್ ನಲ್ಲಿ ಕೋರ್ಟ್ ತೀರ್ಪು ಕೊಟ್ಟಿದೆ. ಹೀಗಿದ್ದರೂ ಮಹೇಶ್ ಶೆಟ್ಟಿ ಮತ್ತೆ ನಮ್ಮ ವಿರುದ್ಧ ಮಾಧ್ಯಮಗಳ ಮುಂದೆ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ನಾವು ಮತ್ತೆ ಅವರನ್ನು ಆಣೆ ಪ್ರಮಾಣಕ್ಕೆ ಕರೀತಾ ಇದ್ದೇವೆ. ಕಾನತ್ತೂರು ನಾಲ್ವರ್ ದೈವಗಳ ಎದುರು ಬಂದು ಆಣೆ ಮಾಡಲಿ ಎಂದು ಧೀರಜ್ ಕೆಲ್ಲಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಅಭಯ ಚಂದ್ರ ಜೈನ್ ಉಪಸ್ಥಿತರಿದ್ದರು.
Web Stories