ಮಂಗಳೂರು: ಕುಮಾರಿ ಸೌಜನ್ಯ ಪ್ರಕರಣವನ್ನು (Soujanya Rape and Murder Case) ಸುಪ್ರೀಂ ಕೋರ್ಟ್ ಮರು ತನಿಖೆಗೆ ಒಪ್ಪಿಸಿರುವ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ(Dharmasthala Temple) ಪರವಾಗಿ ಮುಕ್ತ ಮನಸ್ಸಿನಿಂದ ಸ್ವಾಗತಿಸಲಾಗಿದೆ ಎಂದು ಶ್ರೀ ಕ್ಷೇತ್ರದ ದೇವಾಲಯ ಕಚೇರಿಯ ವ್ಯವಸ್ಥಾಪಕರಾದ ಕೆ. ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಳೆದ ಹಲವು ವರ್ಷಗಳಿಂದ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶ್ರೀ ಕ್ಷೇತ್ರದ ಮೇಲೆ ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕ್ಷೇತ್ರಕ್ಕೆ ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

