– MeeToo ಅಭಿಯಾನಕ್ಕೆ ಮಣಿದಿದ್ದ ಅಕ್ಬರ್
ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ (Dharmendra Pradhan) ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರೀತಿ ಪ್ರತಿಭಟನೆಗೆ ಬಗ್ಗಿ ರಾಜೀನಾಮೆ ಸಲ್ಲಿಸಿರುವುದು ಅಪರೂಪದ ಸಂಗತಿಯಾಗಿದೆ. ಈ ಹಿಂದೆ 2018ರಲ್ಲಿ ಲೈಂಗಿಕ ಕಿರುಕುಳ ಆರೋಪದಲ್ಲಿ ಆಕ್ರೋಶ ಎದುರಿಸಿದ್ದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ಎಂಜೆ ಅಕ್ಬರ್ ( MJ Akbar) ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಸುಮಾರು 8 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರೊಬ್ಬರು ಪ್ರತಿಭಟನೆಗೆ ಮಣಿದು ರಾಜೀನಾಮೆ ನೀಡಿರುವುದು.
ನೀಟ್ ಪ್ರಶ್ನೆ ಪತ್ರಿಕೆ ( NEET 2026) ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಾತುಕತೆಗೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ. ಇದನ್ನೂ ಓದಿ: ‘ಇನ್ನೂ ಹೋರಾಟ ಮುಗಿದಿಲ್ಲ’ – ಪ್ರಧಾನ್ ರಾಜೀನಾಮೆ ಬಳಿಕ ಇನ್ನೂ 3 ಬೇಡಿಕೆ ಈಡೆರಿಸುವಂತೆ ಸಿಜೆಪಿ ಒತ್ತಾಯ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಪ್ರತಿಭಟನೆಯನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ನಿರ್ಮಾಣವಾಗಿತ್ತು.
MeeToo ಅಭಿಯಾನದಿಂದ ಎಂಜೆ ಅಕ್ಬರ್ ರಾಜೀನಾಮೆ
2018 ರ ಅಕ್ಟೋಬರ್ 17ರಂದು ಎಂ.ಜೆ ಅಕ್ಬರ್ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ವಿರುದ್ಧ ಪತ್ರಿಕೆಗಳ ಸಂಪಾದಕರಾಗಿದ್ದಾಗ 20 ಕ್ಕೂ ಹೆಚ್ಚು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿತ್ತು. ಅವರು ಸಚಿವರಾಗಿದ್ದಾಗ ನಡೆದ MeeToo ಅಭಿಯಾನದ ವೇಳೆ ಅವರ ಹೆಸರು ಕೇಳಿಬಂದ ಬೆನ್ನಲ್ಲೇ ರಾಜೀನಾಮೆ ನೀಡಿದ್ದರು.
ಅವರ ರಾಜೀನಾಮೆಯನ್ನು ಕಾಂಗ್ರೆಸ್ ʻಸತ್ಯದ ಗೆಲುವು. ಎಂದು ಕರೆದಿತ್ತು. AAP ಅವರು ಕ್ರಿಮಿನಲ್ ಸಹ ಹೌದು. ಅವರ ವಿರುದ್ಧ ಕ್ರಮ ಕೂಡ ಆಗಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಇದು ಪ್ರಜಾಪ್ರಭುತ್ವದ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಾಂಗ್ಚುಕ್ ಫಸ್ಟ್ ರಿಯಾಕ್ಷನ್
