ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
— Dharmendra Pradhan (@dpradhanbjp) July 25, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ʻಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನ ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ನಿರ್ಮಾಣವಾಗಿತ್ತು. ಈ ಬೆಳವಣಿಗೆಯ ನಡುವೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮಹತ್ವದ ರಾಜಕೀಯ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.
