ಬೆಂಗಳೂರು: ಮಂಗಳವಾರವಷ್ಟೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿದ್ದು ಕೇಂದ್ರ ಸರ್ಕಾರ ಇದೀಗ ರಾಜ್ಯ ಸರ್ಕಾರಗಳಿಗೆ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸುವಂತೆ ಹೇಳಿದೆ.
ಕಳೆದ 3 ತಿಂಗಳಿಂದ ನಾಗಾಲೋಟದಲ್ಲಿ ಸಾಗುತ್ತಿದ್ದ ತೈಲ ಬೆಲೆ ಇಳಿಕೆಗೆ ಅಬಕಾರಿ ಸುಂಕದಲ್ಲಿ 2 ರೂಪಾಯಿ ಕಡಿತ ಮಾಡಿದ್ದ ಕೇಂದ್ರ ಸರ್ಕಾರ ಈಗ ರಾಜ್ಯಗಳೂ ಶೇ.5ರಷ್ಟು ಕಡಿತಗೊಳಿಸಿ ಅಂತ ಹೇಳಿ ಜಾಣತನ ಮೆರೆದಿದೆ.
Advertisement
ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರಾಜ್ಯ ಸರ್ಕಾರಗಳು ವ್ಯಾಟ್ ಮೂಲಕ ಹೇರುತ್ತಿರುವ ತೆರಿಗೆಗಳನ್ನು ಇಳಿಕೆ ಮಾಡುವಂತೆ ಸೂಚಿಸಿದೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೆಂದ್ರ ಪ್ರಧಾನ್ ಕೂಡ ಪತ್ರ ಬರೆದಿದ್ದಾರೆ. ಅಬಕಾರಿ ಸುಂಕವನ್ನು ನಾವು ಇಳಿಕೆ ಮಾಡಿರೋದ್ರಿಂದ ಪೆಟ್ರೋಲ್ ಬೆಲೆ ಲೀಟರ್‍ಗೆ 2 ರೂಪಾಯಿ 50 ಪೈಸೆ ಹಾಗೂ ಡೀಸೆಲ್ ಬೆಲೆ 2 ರೂಪಾಯಿ 25 ಪೈಸೆ ಇಳಿಕೆಯಾಗಿದೆ. ನೀವು ಕೂಡ ವ್ಯಾಟ್ ರೂಪದಲ್ಲಿ ಹಾಕುತ್ತಿರುವ ತೆರಿಗೆಯನ್ನು ಇಳಿಕೆ ಮಾಡಿದ್ರೆ ಪೆಟ್ರೋಲ್ ಬೆಲೆ ಲೀಟರ್‍ಗೆ 5 ರೂಪಾಯಿ ಇಳಿಕೆಯಾಗಲಿದೆ ಅಂತ ಜಾರಿಕೊಂಡಿದ್ದಾರೆ. ಇಷ್ಟಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಕುತ್ತಿರುವ ತೆರಿಗೆಯನ್ನು ಇಳಿಸಿದ್ರೆ ಅರ್ಧಕರ್ಧ ಬೆಲೆ ಇಳಿಕೆಯಾಗುವುದಂತೂ ಸತ್ಯ.
Advertisement
ಯಾವ ರಾಜ್ಯದಲ್ಲಿ ವ್ಯಾಟ್ ಎಷ್ಟಿದೆ?
ಕರ್ನಾಟಕ: ಪೆಟ್ರೋಲ್ – ಶೇ.30, ಡೀಸೆಲ್ – ಶೇ.19
ಮಹಾರಾಷ್ಟ್ರ: ಪೆಟ್ರೋಲ್ – ಶೇ.47.64, ಡೀಸೆಲ್ – ಶೇ.28.39
ಆಂಧ್ರ ಪ್ರದೇಶ: ಪೆಟ್ರೋಲ್ – ಶೇ. 38.83, ಡೀಸೆಲ್ – ಶೇ. 30.82
ಮಧ್ಯಪ್ರದೇಶ: ಪೆಟ್ರೋಲ್ – ಶೇ. 38.79, ಡೀಸೆಲ್ – ಶೇ. 30.22
ತೆಲಂಗಾಣ: ಪೆಟ್ರೋಲ್ – ಶೇ. 35.20, ಡೀಸೆಲ್ – ಶೇ.27.00
ಕೇರಳ: ಪೆಟ್ರೋಲ್ – ಶೇ. 34.06
Advertisement
ಪೆಟ್ರೋಲ್ ಹಾಗೂ ಡೀಸೆಲ್ ಮೂಲಕ ಆದಾಯ ಸಂಗ್ರಹ ಮಾಡುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ದೇಶದಲ್ಲೇ ಐದನೇ ಸ್ಥಾನವಿದೆ. ದೇಶದಲ್ಲೇ ಅತಿ ಹೆಚ್ಚು ತೆರಿಗೆ ವಿಧಿಸೋ ಮಹಾರಾಷ್ಟ್ರ ಸರ್ಕಾರ ಆದಾಯ ಸಂಗ್ರಹದಲ್ಲಿ ಮೊದಲ ಸ್ಥಾನವಿದೆ. ಸೇವಾ ತೆರಿಗೆ, ಪ್ರವೇಶ ತೆರಿಗೆಗಳ ಮೂಲಕ ರಾಜ್ಯಗಳು ಸಂಗ್ರಹ ಮಾಡುವ ಹಣ ಈ ಕೆಳಗಿನಂತಿದೆ.
Advertisement
ತೆರಿಗೆ ಸಂಗ್ರಹದಲ್ಲಿ ಯಾರು ಮೊದಲು:
ನಂ.1 ಮಹಾರಾಷ್ಟ್ರ: 23,160 ಕೋಟಿ ರೂ.
ನಂ.2 ಗುಜರಾತ್: 15,958 ಕೋಟಿ ರೂ.
ನಂ.3 ಉತ್ತರಪ್ರದೇಶ: 15, 850 ಕೋಟಿ ರೂ.
ನಂ.4 ತಮಿಳುನಾಡು: 12, 563 ಕೋಟಿ ರೂ.
ನಂ.5 ಕರ್ನಾಟಕ: 11,103 ಕೋಟಿ ರೂ.
ಯಾರಿಗೆ ಎಷ್ಟು?
ಪೆಟ್ರೋಲ್ ಮೇಲೆ ಅಬಕಾರಿ ಸುಂಕ: 21.48 ಪೈಸೆ (ಲೀಟರ್‍ಗೆ)
ಪೆಟ್ರೋಲ್ ಮೇಲೆ ವ್ಯಾಟ್: ಶೇ.27
ಡೀಲರ್ಸ್‍ಗಳ ಕಮಿಷನ್: 3.23 (ಲೀಟರ್‍ಗೆ)
ಡೀಸೆಲ್ ಮೇಲೆ ಅಬಕಾರಿ ಸುಂಕ: 17.33 (ಲೀಟರ್‍ಗೆ)
ಡೀಸೆಲ್ ಮೇಲಿನ ವ್ಯಾಟ್: ಶೇ.27
ಡೀಲರ್ಸ್‍ಗಳ ಕಮಿಷನ್: 2.17 (ಲೀಟರ್‍ಗೆ)
Urge all states to reduce VAT by 5% in line with the cut in Central Excise Duty to provide farmers & consumers with one more slab of relief. pic.twitter.com/KdRcXd45RF
— Dharmendra Pradhan (@dpradhanbjp) October 4, 2017
States are the ultimate beneficiaries of Taxes on Petrol/Diesel & hence should share the responsibility of providing relief to consumers. pic.twitter.com/vLJE3mP4tE
— Dharmendra Pradhan (@dpradhanbjp) October 4, 2017