ಬೆಂಗಳೂರು: ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವು ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.
ಎಕ್ಸ್‌ನಲ್ಲಿ (X) ಪೋಸ್ಟ್ ಹಂಚಿಕೊಂಡಿರುವ ಅವರು, ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಸಿಜೆಪಿಯ 3 ಬೇಡಿಕೆಗಳಿಗೆ ಒಪ್ಪಿದ ಕೇಂದ್ರ – ದೆಹಲಿಯಲ್ಲಿ ನಡೆಯುತ್ತಿದ್ದ GenZ ಪ್ರತಿಭಟನೆ ಅಂತ್ಯ
The resignation of Union Education Minister Dharmendra Pradhan is a victory for the awakened students and youth of this country. I extend my heartfelt congratulations to each one of them.
This is a victory for democracy and the Constitution. Lakhs of students and young people… pic.twitter.com/udNjT4ZapZ
— Siddaramaiah (@siddaramaiah) July 25, 2026
ಕಾಂಗ್ರೆಸ್ (Congress) ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಅಭಿನಂದಿಸುತ್ತೇನೆ. ಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗಲಾರದು ಎಂದು ಹೇಳಿದ್ದಾರೆ.
The resignation of Union Education Minister Dharmendra Pradhan is a victory for the awakened students and youth of this country. I extend my heartfelt congratulations to each one of them.
This is a victory for democracy and the Constitution. Lakhs of students and young people… pic.twitter.com/udNjT4ZapZ
— Siddaramaiah (@siddaramaiah) July 25, 2026
ರಾಜಕೀಯದಿಂದ ಶಿಕ್ಷಣದವರೆಗೆ ಎಲ್ಲವನ್ನೂ ವ್ಯಾಪಾರೀಕರಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುವವರೆಗೆ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲಾರದು. ಈ ಹಿನ್ನೆಲೆ ಒಬ್ಬ ಅಸಮರ್ಥ ಮತ್ತು ಭ್ರಷ್ಟ ಸಚಿವನ ರಾಜೀನಾಮೆಗಾಗಿ ಸಂಭ್ರಮಾಚರಣೆ ಮಾಡದೆ, ದೇಶದ ವಿದ್ಯಾರ್ಥಿ-ಯುವಜನರು ಕೇಂದ್ರದಲ್ಲಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವವರೆಗೆ ವಿರಮಿಸಬಾರದು. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರ ಜೊತೆಗೆ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: CJP Protest Live Updates | ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ದೆಹಲಿ ಪ್ರತಿಭಟನೆ ಅಂತ್ಯ
