ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆ ಸ್ವಾಗತಾರ್ಹವಾಗಿದೆ. ರಾಷ್ಟ್ರೀಯ ವಿಷಯಗಳಲ್ಲಿ ಸಚಿವರು ತಮ್ಮ ಜವಾಬ್ದಾರಿಯನ್ನು ಹೊರುವ ಹೊಣೆಗಾರಿಕೆಯನ್ನು ಇದು ಮತ್ತಷ್ಟು ಬಲಪಡಿಸಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (DCM Parameshwar) ಅವರು ಹೇಳಿದರು.
ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀಟ್ ಪರೀಕ್ಷೆ (NEET Scam) ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಪರೀಕ್ಷೆಯಾಗಿದೆ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಿಂದ ಪರೀಕ್ಷೆಯ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿಗಳು ವ್ಯಾಪಕವಾಗಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದರಂತೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತಾರಾ.. ಕಾದು ನೋಡೋಣ ಎಂದರು.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸ್ವಾಗತಾರ್ಹ. ಅಧಿಕಾರದ ಜವಾಬ್ದಾರಿ ಹೊಂದಿರುವವರು ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಉತ್ತರದಾಯಕರಾಗಬೇಕು ಎಂಬ ಸ್ಪಷ್ಟ ಸಂದೇಶ ಇದರಿಂದ ಸಿಗುತ್ತದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಆಡಳಿತದಲ್ಲಿ ಜವಾಬ್ದಾರಿತನವನ್ನು ಇನ್ನಷ್ಟು ಬಲಪಡಿಸುವ ಉತ್ತಮ ಸಂಪ್ರದಾಯಕ್ಕೆ ಇದು ನಾಂದಿ ಹಾಡಲಿದೆ ಎಂದು ಹೇಳಿದರು.ಇದನ್ನೂ ಓದಿ: ಉಕ್ರೇನ್‌ನ ಒಡೆಸಾ ಬಂದರಿನಲ್ಲಿ ಹಡಗಿನ ಮೇಲೆ ಮತ್ತೊಂದು ದಾಳಿ – ಇಬ್ಬರು ಭಾರತೀಯರು ನಾಪತ್ತೆ
ಜವಾಬ್ದಾರಿಯ ಸ್ಥಾನದಲ್ಲಿರುವವರು ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕ ಆಡಳಿತದಲ್ಲಿ ಜವಾಬ್ದಾರಿತನ ಇನ್ನಷ್ಟು ಹೆಚ್ಚಲಿದೆ ಎಂದರು.ಇದನ್ನೂ ಓದಿ: ಇರಾನ್ ಮೇಲಿನ ಏರ್‌ಸ್ಟ್ರೈಕ್‌ಗೆ ತಾತ್ಕಾಲಿಕ ತಡೆ – ರಾಜತಾಂತ್ರಿಕ ಮಾತುಕತೆಗೆ ಮುಂದಾದ ಟ್ರಂಪ್
