ಧಾರವಾಡ‌ | ಬಿಜೆಪಿ ಮಹಿಳಾ ಮೋರ್ಚಾ ಮುಖಂಡೆಯ ಪತಿ ನೇಣಿಗೆ ಶರಣು‌

Public TV
1 Min Read
Eshwar Masuti

ಧಾರವಾಡ: ಇಲ್ಲಿನ (Dharwad) ತಾಲೂಕು ಬಿಜೆಪಿ (BJP) ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಕಲಾ ಮಸೂತಿ ಅವರ ಪತಿ ಈಶ್ವರ್ ಮಸೂತಿ (50) ಯವರು ನೇಣಿಗೆ ಶರಣಾಗಿದ್ದಾರೆ.

ಉಪ್ಪಿನ ಬೆಟಗೇರಿ ಗ್ರಾಮದ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆಗೆ ಆರೋಗ್ಯ ಸಮಸ್ಯೆಯೇ ಕಾರಣ ಎಂದು ಶಂಕಿಸಲಾಗಿದೆ. ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ ಇದ್ದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಇದನ್ನೂ ಓದಿ: 162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

ಈಶ್ವರ ಮಸೂತಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕಿ ಸೀಮಾ ಮಸೂತಿ ಅವರ ಸಂಬಂಧಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಗರಗ ಪೊಲೀಸ್ ಠಾಣೆ ಪಿಎಸ್ಐ ಸಿದ್ರಾಮಪ್ಪ ಉಣ್ಣದ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆ ಕೇಸ್ – ಪತಿಗೆ ಅನೈತಿಕ ಸಂಬಂಧದ ಶಂಕೆಯಿಂದ ಪತ್ನಿ ಸೂಸೈಡ್

Share This Article