ಧಾರವಾಡ: ಜಿಲ್ಲೆಯ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ಕಾಟನ್ ಮಿಲ್ನಲ್ಲಿ ಬೆಂಕಿ ಅವಘಡ ಸಂಭವಿಸಿ ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮವಾದ ಘಟನೆ ನಡೆದಿದೆ.
ರಾಜೇಶ್ ಕಾಟನ್ ಜಿನ್ನಿಂಗ್ ಮತ್ತು ಪ್ರೇಸಿಂಗ್ ಮಿಲ್ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಕೋಟ್ಯಂತರ ರೂ. ಮೌಲ್ಯದ ಹತ್ತಿ ಜೊತೆ ಹತ್ತಿ ಕಾಳು ಹಾಗೂ ಹಿಂಡಿ ಕೂಡಾ ಬೆಂಕಿಗೆ ಆಹುತಿಯಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಅನ್ಯಾಯ – ರಾಷ್ಟ್ರಧ್ವಜ ತಯಾರಿಕೆಯಲ್ಲಿ ಬದಲಾವಣೆ
Advertisement
Advertisement
ಸ್ಥಳಕ್ಕೆ ಧಾರವಾಡ ಹಾಗೂ ಬೇಲೂರು ಕೈಗಾರಿಕಾ ಪ್ರದೇಶ ಸೇರಿದಂತೆ ಒಟ್ಟು ಮೂರು ಅಗ್ನಿಶಾಮಕ ಭೇಟಿ ನೀಡಿದ್ದು, ಬೆಂಕಿ ನಂದಿಸಲು ಪ್ರಯತ್ನ ನಡೆಸಿವೆ. ಗೋಡಾನ್ನಲ್ಲಿ ಹತ್ತಿಗಳನ್ನು ಇಡಲಾಗಿತ್ತು. ಆದರೆ ಈ ವೇಳೆ ಏಕಾಎಕಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಧಾರವಾಡ ಗರಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ವಿಜೃಂಭಣೆಯಿಂದ ನಡೆದ ಐತಿಹಾಸಿಕ ಶರಣಬಸವೇಶ್ವರರ 200ನೇ ಜಾತ್ರಾ ಮಹೋತ್ಸವ