Connect with us

Dharwad

ಕ್ರೂಸರ್, ಬೈಕ್ ಡಿಕ್ಕಿ- ಬರ್ತ್ ಡೇ ಮುಗಿಸಿ ಬರ್ತಿದ್ದ ಮೂವರ ಸಾವು

Published

on

ಧಾರವಾಡ: ಕ್ರೂಸರ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಬಳಿ ನಡೆದಿದೆ.

ಜಿಲ್ಲೆಯ ಹನಸಿ ಗ್ರಾಮದ ಮಹಾಂತೇಶ ನಿಂಗಪ್ಪ ಗುಜ್ಜಳ (26), ಚಂದ್ರಗೌಡ ಶಿವನಗೌಡ ರಾಯನಗೌಡ (28) ಹಾಗೂ ಹೆಬ್ಬಾಳ ಗ್ರಾಮದ ಆನಂದ ನಿಂಗಪ್ಪ ಜೆಟ್ಟೆನವರ (26) ಎಂಬವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ರಾತ್ರಿ ಈ ಮೂವರು ಗೆಳೆಯನ ಬರ್ತ್ ಡೇ ಪಾರ್ಟಿಗೆಂದು ನವಲಗುಂದಕ್ಕೆ ಹೋಗಿದ್ದಾರೆ. ಅಲ್ಲಿಯ ಒಂದು ಡಾಬಾದಲ್ಲಿ ಪಾರ್ಟಿ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.